Tuesday, August 4, 2026
Tuesday, August 4, 2026

S.N. Channabasappa ಮೈದುಂಬಿದ ಹರಿವ ತುಂಗೆ ಶಿವಮೊಗ್ಗ ನಗರದ ಜೀವನಾಡಿ, ಸಮೃದ್ಧಿಯ ಸಂಕೇತ : ಎಸ್.ಎನ್.ಚನ್ನಬಸಪ್ಪ

Date:

S.N. Channabasappa “ಶಿವಮೊಗ್ಗ ನಗರದ ಜೀವನಾಡಿ ಹಾಗೂ ಸಮೃದ್ಧಿಯ ಸಂಕೇತವಾಗಿ ಮೈದುಂಬಿ ಹರಿಯುತ್ತಿರುವ ಜೀವನದಾಯಿನಿ ತಾಯಿ ತುಂಗಾ ನದಿಗೆ ಬಾಗಿನ ಅರ್ಪಿಸುವುದು ನಮ್ಮ ನಾಡಿನ ಪವಿತ್ರ ಪರಂಪರೆ ಮತ್ತು ಕೃತಜ್ಞತೆಯ ಸಂಕೇತವಾಗಿದೆ,” ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್. ಎನ್. ಚನ್ನಬಸಪ್ಪ (ಚೆನ್ನಿ) ಅವರು ತಿಳಿಸಿದರು.

ಭಾರತೀಯ ಜನತಾ ಪಾರ್ಟಿ ಶಿವಮೊಗ್ಗ ನಗರ ಘಟಕದ ವತಿಯಿಂದ, ಕೋಟೆ ರಸ್ತೆಯ ಐತಿಹಾಸಿಕ ಶ್ರೀ ಕೋರ್ಪಳಯ್ಯನ ಛತ್ರದ ಆವರಣದಲ್ಲಿ ಮೈದುಂಬಿ ಹರಿಯುತ್ತಿರುವ ತಾಯಿ ತುಂಗೆಗೆ ಭಕ್ತಿಪೂರ್ವಕವಾಗಿ ಬಾಗಿನ ಸಮರ್ಪಿಸಿ, ಮಾನ್ಯ ಶಾಸಕರು ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ತಾಯಿ ತುಂಗೆಯ ಅನಂತ ಕೃಪೆಯಿಂದ ನಮ್ಮ ಶಿವಮೊಗ್ಗ ನಗರ ಹಾಗೂ ಇಡೀ ಜಿಲ್ಲೆಯಲ್ಲಿ ಸದಾ ಸುಭಿಕ್ಷೆ, ಸಮೃದ್ಧಿ ನೆಲೆಸಲಿ. ನಮ್ಮ ಭಾಗದ ಅನ್ನದಾತರ ಮೊಗದಲ್ಲಿ ನಿರಂತರ ಮಂದಹಾಸ ಮೂಡಿ, ಪ್ರತಿಯೊಬ್ಬ ನಾಗರಿಕನಿಗೂ ಆಯುರಾರೋಗ್ಯ, ಸುಖ-ಶಾಂತಿ ಹಾಗೂ ಸೌಹಾರ್ದತೆ ಸಿಗಲಿ,” ಎಂದು ಶ್ರದ್ಧೆಯಿಂದ ಪ್ರಾರ್ಥಿಸಿದರು.

S.N. Channabasappa ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಶ್ರೀ ದತ್ತಾತ್ರಿ, ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಜಗದೀಶ್, ನಗರ ಅಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ್ ಸರ್ಜಿ ಹಾಗೂ ಬಿಜೆಪಿ ಶಿವಮೊಗ್ಗ ಜಿಲ್ಲಾ ಮತ್ತು ನಗರ ಘಟಕದ ಗೌರವಾನ್ವಿತ ಪದಾಧಿಕಾರಿಗಳು, ಪ್ರಮುಖ ಮುಖಂಡರು ಹಾಗೂ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಬಾಂಧವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga “ಭಾರತ್ ಜೋಡೋ” ಯೋಜನೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ: ಪ್ರಭುಲಿಂಗ ಕವಳಿಕಟ್ಟಿ

DC Shivamogga ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ-ಸಾಮಾಜಿಕ...

B.Y. Raghavendra ಕೇಂದ್ರದ ಅಟಲ್ ಪಿಂಚಣಿ ಯೋಜನೆಗೆಶಿವಮೊಗ್ಗ ಜಿಲ್ಲೆಯಲ್ಲಿ ಗಮನಾರ್ಹ ಸ್ಪಂದನ- ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ಅಸಂಘಟಿತ ವಲಯದಲ್ಲಿ ದುಡಿಯುವ ಲಕ್ಷಾಂತರ ಕಾರ್ಮಿಕರಿಗೂ ವೃದ್ಧಾಪ್ಯದಲ್ಲಿ ಆರ್ಥಿಕ...

S. N. Channabasappa ಶಿವಮೊಗ್ಗ ಸಾಂಸ್ಕೃತಿಕ ರಾಜಧಾನಿ ಎಂಬ ಪ್ರಸಿದ್ಧಿಗೆ ಇಲ್ಲಿನ ಸಹೃದಯರೇ ಕಾರಣ- ಕಾ.ವೆಂ‌.ಶ್ರೀ.

S. N. Channabasappa "ಶಿವಮೊಗ್ಗ ನಗರದ ಜೀವನಾಡಿ ಹಾಗೂ ಸಮೃದ್ಧಿಯ ಸಂಕೇತವಾಗಿ...