Monday, August 17, 2026
Monday, August 17, 2026

B.Y. Raghavendra ಕೇಂದ್ರದ ಅಟಲ್ ಪಿಂಚಣಿ ಯೋಜನೆಗೆಶಿವಮೊಗ್ಗ ಜಿಲ್ಲೆಯಲ್ಲಿ ಗಮನಾರ್ಹ ಸ್ಪಂದನ- ಸಂಸದ ಬಿ.ವೈ.ರಾಘವೇಂದ್ರ

Date:

B.Y. Raghavendra ಅಸಂಘಟಿತ ವಲಯದಲ್ಲಿ ದುಡಿಯುವ ಲಕ್ಷಾಂತರ ಕಾರ್ಮಿಕರಿಗೂ ವೃದ್ಧಾಪ್ಯದಲ್ಲಿ ಆರ್ಥಿಕ ಭದ್ರತೆ ಹಾಗೂ ಗೌರವಯುತ ಜೀವನವನ್ನು ಖಾತ್ರಿಪಡಿಸುವ ಉದ್ದೇಶದಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಟಲ್ ಪಿಂಚಣಿ ಯೋಜನೆ (APY) ದೇಶಾದ್ಯಂತ ವ್ಯಾಪಕವಾಗಿ ವಿಸ್ತರಿಸುತ್ತಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿಯೂ ಗಮನಾರ್ಹ ಸ್ಪಂದನೆ ದೊರೆತಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಶ್ರೀ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.

ಅಟಲ್ ಪಿಂಚಣಿ ಯೋಜನೆಯ ಅನುಷ್ಠಾನ, ಫಲಾನುಭವಿಗಳ ಸಂಖ್ಯೆ, ಮಹಿಳೆಯರ ಭಾಗವಹಿಸುವಿಕೆ, ಯೋಜನೆಯ ಆರ್ಥಿಕ ಬಲ ಹಾಗೂ ಕರ್ನಾಟಕ ಮತ್ತು ಜಿಲ್ಲಾವಾರು ಮಾಹಿತಿಯನ್ನು ಕೋರಿ ಸಂಸತ್ತಿನಲ್ಲಿ ಶ್ರೀ ಬಿ.ವೈ. ರಾಘವೇಂದ್ರ ಅವರು ಕೇಳಿದ ಪ್ರಶ್ನೆಗೆ ಕೇಂದ್ರ ಸರ್ಕಾರ ನೀಡಿರುವ ಉತ್ತರವು ಯೋಜನೆಯ ವ್ಯಾಪಕ ವಿಸ್ತರಣೆಯನ್ನು ಅಂಕಿಅಂಶಗಳ ಮೂಲಕ ತೋರಿಸಿದೆ.

ಕೇಂದ್ರ ಸರ್ಕಾರದ ಉತ್ತರದ ಪ್ರಕಾರ, 2026ರ ಜೂನ್ 30ರ ವೇಳೆಗೆ ದೇಶಾದ್ಯಂತ 9,29,47,723 ಮಂದಿ ಅಟಲ್ ಪಿಂಚಣಿ ಯೋಜನೆಗೆ ಸೇರ್ಪಡೆಯಾಗಿದ್ದು, ಅವರಲ್ಲಿ 4,56,98,133 ಮಹಿಳೆಯರು ಸೇರಿದ್ದಾರೆ. ಯೋಜನೆಯಡಿ ಸುಮಾರು ₹57,296 ಕೋಟಿಯಷ್ಟು ನಿಧಿಯನ್ನು ನಿರ್ವಹಿಸಲಾಗುತ್ತಿದ್ದು, ಇದು ಯೋಜನೆಯ ಮೇಲಿನ ಜನರ ವಿಶ್ವಾಸ ಹಾಗೂ ಅದರ ವಿಸ್ತಾರವನ್ನು ಪ್ರತಿಬಿಂಬಿಸುತ್ತದೆ.

ಕರ್ನಾಟಕದಲ್ಲಿ 52,72,744 ಮಂದಿ ಈ ಯೋಜನೆಗೆ ನೋಂದಾಯಿಸಿಕೊಂಡಿದ್ದು, ಅವರಲ್ಲಿ 25,10,470 ಮಹಿಳೆಯರು ಇದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ 1,58,401 ಮಂದಿ ಅಟಲ್ ಪಿಂಚಣಿ ಯೋಜನೆಯಡಿ ಸೇರ್ಪಡೆಯಾಗಿದ್ದು, ಅವರಲ್ಲಿ 79,584 ಮಹಿಳೆಯರು ಇದ್ದಾರೆ. ಇದು ಜಿಲ್ಲೆಯಲ್ಲಿಯೂ ಯೋಜನೆಗೆ ಗಣನೀಯ ಪ್ರಮಾಣದ ನೋಂದಣಿಯಾಗಿರುವುದನ್ನು ತೋರಿಸುತ್ತದೆ.

B.Y. Raghavendra ಈ ಕುರಿತು ಪ್ರತಿಕ್ರಿಯಿಸಿದ ಶ್ರೀ ಬಿ.ವೈ. ರಾಘವೇಂದ್ರ, “ರೈತರು, ಕೂಲಿ ಕಾರ್ಮಿಕರು, ಸಣ್ಣ ವ್ಯಾಪಾರಿಗಳು, ಸ್ವಯಂ ಉದ್ಯೋಗಿಗಳು ಸೇರಿದಂತೆ ಅಸಂಘಟಿತ ವಲಯದಲ್ಲಿ ದುಡಿಯುವ ಲಕ್ಷಾಂತರ ಜನರಿಗೆ ವೃದ್ಧಾಪ್ಯದಲ್ಲಿ ಆರ್ಥಿಕ ಭದ್ರತೆ ಹಾಗೂ ಖಚಿತ ಪಿಂಚಣಿಯ ಸೌಲಭ್ಯವನ್ನು ತಲುಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಅಟಲ್ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದೆ. ದುಡಿಯುವ ಅವಧಿಯಲ್ಲಿ ನಿಯಮಿತ ಉಳಿತಾಯವನ್ನು ಪ್ರೋತ್ಸಾಹಿಸುವ ಮೂಲಕ 60 ವರ್ಷಗಳ ನಂತರ ಖಚಿತ ಆದಾಯದ ಭರವಸೆ ನೀಡುವ ಈ ಯೋಜನೆ, ಸಾಮಾನ್ಯ ಕುಟುಂಬಗಳ ಭವಿಷ್ಯವನ್ನು ಆರ್ಥಿಕವಾಗಿ ಮತ್ತಷ್ಟು ಭದ್ರಗೊಳಿಸುವ ಮಹತ್ವದ ಹೆಜ್ಜೆಯಾಗಿದೆ. ಕಳೆದ ಒಂದು ದಶಕದಲ್ಲಿ ಯೋಜನೆಗೆ ನಿರಂತರವಾಗಿ ಹೆಚ್ಚುತ್ತಿರುವ ನೋಂದಣಿ, ಯೋಜನೆಯ ಮೇಲಿನ ಜನರ ವಿಶ್ವಾಸ ಹಾಗೂ ಅದರ ವ್ಯಾಪಕ ಸ್ವೀಕಾರವನ್ನು ಪ್ರತಿಬಿಂಬಿಸುತ್ತದೆ,” ಎಂದು ಹೇಳಿದರು.

ಅಟಲ್ ಪಿಂಚಣಿ ಯೋಜನೆಯ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಿ, ಅರ್ಹ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಯೋಜನೆಗೆ ನೋಂದಾಯಿಸಿಕೊಳ್ಳುವ ಮೂಲಕ ತಮ್ಮ ಹಾಗೂ ತಮ್ಮ ಕುಟುಂಬದ ಭವಿಷ್ಯವನ್ನು ಆರ್ಥಿಕವಾಗಿ ಭದ್ರಪಡಿಸಿಕೊಳ್ಳುವಂತೆ ಶ್ರೀ ಬಿ .ವೈ. ರಾಘವೇಂದ್ರ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bharat Scouts and Guides ಸ್ಕೌಟ್ಸ್ ಮತ್ತು ಗೈಡ್ಸ್ ನ ಪ್ರಮುಖ ಧ್ಯೇಯವೇ ದೇಶಪ್ರೇಮ- ಶಕುಂತಳಾ ಚಂದ್ರಶೇಖರ್

Bharat Scouts and Guides ನಮ್ಮ ದೇಶದ 80ನೇ ಸ್ವಾತಂತ್ರ್ಯೋತ್ಸವವನ್ನು ಭಾರತ್...

Chamber of commerce Shivamogga ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಜಾಗತಿಕವಾಗಿ ಗಂಭೀರ ಸಮಸ್ಯೆಯಾಗಿದೆ: ಆರ್.ಮನೋಹರ್

Chamber of commerce Shivamogga ಶಿವಮೊಗ್ಗ ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್...

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...