Monday, August 17, 2026
Monday, August 17, 2026

DC Shivamogga “ಭಾರತ್ ಜೋಡೋ” ಯೋಜನೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ: ಪ್ರಭುಲಿಂಗ ಕವಳಿಕಟ್ಟಿ

Date:

DC Shivamogga ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ-ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸುವ ಉದ್ದೇಶದಿಂದ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿರುವ ‘ಭಾರತ್ ಜೋಡೋ ಯುವ ಸಂಘ’ಗಳ ಸ್ಥಾಪನೆ ಯೋಜನೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದ್ದು, ಎಂದು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕೆಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು.
ಸೋಮವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಭಾರತ್ ಜೋಡೋ ಯುವ ಸಂಘ ಸ್ಥಾಪನೆ ಕುರಿತಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಪ್ಲಿಕೇಶನ್ ಬಿಡುಗಡೆ: ಆಯಾ ಸ್ಥಳೀಯ ಸಂಸ್ಥೆಗಳು ಹಾಗೂ ನಗರ ಸಂಸ್ಥೆಗಳ ವ್ಯಾಪ್ತಿಯಲ್ಲಿ ಯುವ ಸಂಘಗಳ ಸ್ಥಾಪನೆ ಕುರಿತು ತಕ್ಷಣದಿಂದಲೇ ಪ್ರಚಾರ ಕೈಗೊಳ್ಳಲು ಹಾಗೂ ಪ್ರಥಮ ಹಂತವಾಗಿ ಆಗಸ್ಟ್ 06 ರಂದು ಅಧಿಕೃತವಾಗಿ ನೋಂದಣಿ ಆ್ಯಪ್ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.
ಸಂಘಗಳ ಸ್ಥಾಪನೆ ಗಡುವು: ದಿನಾಂಕ 15-08-2026 ರ ಒಳಗಾಗಿ ಎಲ್ಲಾ ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್, ಪುರಸಭೆ, ನಗರಸಭೆ ಹಾಗೂ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಕನಿಷ್ಠ 100 ಸದಸ್ಯರನ್ನೊಳಗೊಂಡ ಯುವ ಸಂಘಗಳನ್ನು ರಚನೆ ಮಾಡಲು ಸೂಚಿಸಿದರು.
ಪ್ರತಿ ಸಂಘಕ್ಕೆ ಪ್ರತಿ ವರ್ಷ ತಲಾ ರೂ. 10 ಲಕ್ಷಗಳ ಅನುದಾನ ನೀಡಿ ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ.
ಸ್ಥಳೀಯ ಸಂಸ್ಥೆಗಳ ಪ್ರಕಾರ ಸಂಘಗಳ ಹಂಚಿಕೆ ವಿವರ:
ಶಿವಮೊಗ್ಗ ಮಹಾನಗರ ಪಾಲಿಕೆ: 40 ಸಂಘಗಳು, ಭದ್ರಾವತಿ ನಗರಸಭೆ: 17 ಸಂಘಗಳು, ಸಾಗರ ನಗರಸಭೆ: 07 ಸಂಘಗಳು, ಶಿಕಾರಿಪುರ ಪುರಸಭೆ: 06 ಸಂಘಗಳು, ಶಿರಾಳಕೊಪ್ಪ ಪಟ್ಟಣ ಪಂಚಾಯತ್: 03 ಸಂಘಗಳು, ಸೊರಬ ಪಟ್ಟಣ ಪಂಚಾಯತ್: 03 ಸಂಘಗಳು, ಆನವಟ್ಟಿ ಪಟ್ಟಣ ಪಂಚಾಯತ್: 05 ಸಂಘಗಳು, ಜೋಗ್ ಕಾರ್ಗಲ್ ಪಟ್ಟಣ ಪಂಚಾಯತ್: 03 ಸಂಘಗಳು, ಹೊಳೆಹೊನ್ನೂರು ಪಟ್ಟಣ ಪಂಚಾಯತ್: 04 ಸಂಘಗಳು, ಹೊಸನಗರ ಪಟ್ಟಣ ಪಂಚಾಯತ್: 02 ಸಂಘಗಳು ಮತ್ತು ತೀರ್ಥಹಳ್ಳಿ ಪಟ್ಟಣ ಪಂಚಾಯತ್: 04 ಸಂಘಗಳು ಹಾಗೂ ಜಿಲ್ಲೆಯ ಒಟ್ಟು ಗ್ರಾಮಪಂಚಾಯತ್‌ಗಳಿಂದ: 262 ಸಂಘಗಳನ್ನು ಸ್ಥಾಪಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
DC Shivamogga ಸಂಘದ ಸದಸ್ಯತ್ವಕ್ಕೆ ಅರ್ಹತೆ ಮತ್ತು ನಿಯಮಗಳು:
ಆಧಾರ್ ಕಾರ್ಡ್ ಕಡ್ಡಾಯವಾಗಿದ್ದು, ಒಬ್ಬ ವ್ಯಕ್ತಿ ಕೇವಲ ಒಂದು ಸಂಘದಲ್ಲಿ ಮಾತ್ರ ನೋಂದಣಿಯಾಗಲು ಅವಕಾಶವಿರುತ್ತದೆ.
ವಯೋಮಿತಿ 16 ರಿಂದ 35 ವರ್ಷಗಳ ಒಳಗಿರಬೇಕು.
ಸದಸ್ಯರು ಸಂಬಂಧಿಸಿದ ಸ್ಥಳೀಯ ಸಂಸ್ಥೆ / ನಗರ ಸಂಸ್ಥೆ ವ್ಯಾಪ್ತಿಯಲ್ಲಿ ಕನಿಷ್ಠ 6 ತಿಂಗಳುಗಳಿಂದ ವಾಸವಾಗಿರಬೇಕು.
ಈ ಯೋಜನೆಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮೂಲಕ ಅನುಷ್ಠಾನಗೊಳಿಸಲಾಗುತ್ತಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಕಂದಾಯ ಇಲಾಖೆ ಹಾಗೂ ಶಿಕ್ಷಣ ಇಲಾಖೆಗಳು ಪೂರ್ಣ ಸಹಕಾರ ನೀಡಲಿವೆ ಎಂದು ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಹೇಮಂತ್, ಎನ್., ಅಪರ ಜಿಲ್ಲಾಧಿಕಾರಿಗಳಾದ ಅಭಿಷೇಕ್ ವಿ., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರೇಖ್ಯಾ ನಾಯ್ಕ್ ಹಾಗೂ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bharat Scouts and Guides ಸ್ಕೌಟ್ಸ್ ಮತ್ತು ಗೈಡ್ಸ್ ನ ಪ್ರಮುಖ ಧ್ಯೇಯವೇ ದೇಶಪ್ರೇಮ- ಶಕುಂತಳಾ ಚಂದ್ರಶೇಖರ್

Bharat Scouts and Guides ನಮ್ಮ ದೇಶದ 80ನೇ ಸ್ವಾತಂತ್ರ್ಯೋತ್ಸವವನ್ನು ಭಾರತ್...

Chamber of commerce Shivamogga ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಜಾಗತಿಕವಾಗಿ ಗಂಭೀರ ಸಮಸ್ಯೆಯಾಗಿದೆ: ಆರ್.ಮನೋಹರ್

Chamber of commerce Shivamogga ಶಿವಮೊಗ್ಗ ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್...

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...