Wednesday, August 5, 2026
Wednesday, August 5, 2026

ಪುಸ್ತಕ ಪ್ರಿಯರೆ…ಆಗಸ್ಟ್ ತಿಂಗಳ ಪೂರ್ಣ ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೆ. 50 ರಿಯಾಯಿತಿ

Date:

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ 2026ರ ಆಗಸ್ಟ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50%ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು.
ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್ ಲೈನ್ https://kpp.Karnataka.gov.in ಆನ್‌ಲೈನ್ ಪುಸ್ತಕ ಖರೀದಿಗೆ ವಿಭಾಗದಲ್ಲಿ ಕೂಡ ಈ ಶೇ.50% ರಿಯಾಯಿತಿ ಲಭ್ಯವಿದೆ.
ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃತಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 769 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭದ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದ್ದಾಗಿದ್ದು, ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳುವಂತೆ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga News ಥಣ್ಣಗಾಗುತ್ತಿರುವ ಸಚಿವಾಕಾಂಕ್ಷಿತನ..…ಶಿವಕೌಶಲ

Shivamogga News ರಾಜಕೀಯದಲ್ಲಿ ಸ್ಥಿರತೆ ಯಾವತ್ತಿಗೂ ನಿರೀಕ್ಷಿಸಲಾಗದು ಎಂಬ ಮುತ್ಸದ್ದಿಗಳ ಮಾತಿದೆ....

DC Shivamogga ಮುಂದಿನ 61 ವಾರಗಳಿಗೆ ಜಾನುವಾರುಗಳ ಅಗತ್ಯ ಮೇವಿಗೆ ಕೊರತೆಯಿಲ್ಲ : ಪ್ರಭುಲಿಂಗ ಕವಳಿಕಟ್ಟಿ

DC Shivamogga ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಗಸ್ಟ್...