Monday, August 17, 2026
Monday, August 17, 2026

ಕಾನೂ‌ನು ತರಬೇತಿ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಕಟಣೆ

Date:

ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಕಾನೂನು ಪದವಿಯಲ್ಲಿ ಉತ್ತೀರ್ಣರಾದ ಅಲ್ಸಸಂಖ್ಯಾತರ ವರ್ಗಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ದ, ಪಾರ್ಸಿ ಅಭ್ಯರ್ಥಿಗಳಿಗೆ 2026-27 ನೇ ಸಾಲಿನಿಂದ ನಾಲ್ಕು ವರ್ಷಗಳ ತರಬೇತಿ ಅವಧಿಯಲ್ಲಿ ಶಿಷ್ಯವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಕಾನೂನು ತರಬೇತಿಯು 4 ವರ್ಷಗಳ ಅವಧಿಯಾಗಿದ್ದು, ಮಾಸಿಕ ರೂ.5000/- ಗಳನ್ನು ಶಿಷ್ಯವೇತನ ನೀಡಲಾಗುವುದು. ಅಭ್ಯರ್ಥಿಯು ಅಡ್ವೊಕೇಟ್ ಆಗಿ ಕಾರ್ಯ ನಿರ್ವಹಿಸಲು ನಿಗದಿಪಡಿಸಿದ ಕಾನೂನು ಪರೀಕ್ಷೆಯಲ್ಲಿ ತೇರ್ಗಡೆಯಾಗಿ 2 ವರ್ಷಗಳ ಅವಧಿಯೊಳಗಿದ್ದು, ವಯೋಮಿತಿ 30 ವರ್ಷದೊಳಗಿರಬೇಕು. ತಮ್ಮ ಹೆಸರನ್ನು ಬಾರ್ ಕೌನ್ಸಿಲ್‌ನಲ್ಲಿ ನೋಂದಾಯಿಸಿರಬೇಕು ಹಾಗೂ ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್ ಸರ್ಕಾರಿ ವಕೀಲರು ಅಥವಾ ಕನಿಷ್ಠ 20 ವರ್ಷಗಳ ವೃತ್ತಿ ಅನುಭವವಿರುವ ವಕೀಲರ ಅಧೀನದಲ್ಲಿ ತರಬೇತಿ ಪಡೆಯುವುದು. ಕುಟುಂಬದ ವಾರ್ಷಿಕ ಆದಾಯ ರೂ.3.50 ಲಕ್ಷ ಮೀರಿರಬಾರದು.
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಇಲಾಖಾ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿದ ಆ. 31 ರೊಳಗಾಗಿ ಸಲ್ಲಿಸಬೇಕು.
ಅರ್ಜಿ ಹಾಗೂ ಹೆಚ್ಚಿನ ವಿವರಗಳಿಗೆ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, 1ನೇ ಮಹಡಿ, ಸತ್ಯಶ್ರೀ ಆರ್ಕೇಡ್, 5ನೇ ಪ್ಯಾರಲ್ ರಸ್ತೆ, ದುರ್ಗಿಗುಡಿ, ಶಿವಮೊಗ್ಗ ದೂ.ಸಂ: 08182-220206 ನ್ನು ಸಂಪರ್ಕಿಸಬಹುದೆಂದು ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bharat Scouts and Guides ಸ್ಕೌಟ್ಸ್ ಮತ್ತು ಗೈಡ್ಸ್ ನ ಪ್ರಮುಖ ಧ್ಯೇಯವೇ ದೇಶಪ್ರೇಮ- ಶಕುಂತಳಾ ಚಂದ್ರಶೇಖರ್

Bharat Scouts and Guides ನಮ್ಮ ದೇಶದ 80ನೇ ಸ್ವಾತಂತ್ರ್ಯೋತ್ಸವವನ್ನು ಭಾರತ್...

Chamber of commerce Shivamogga ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಜಾಗತಿಕವಾಗಿ ಗಂಭೀರ ಸಮಸ್ಯೆಯಾಗಿದೆ: ಆರ್.ಮನೋಹರ್

Chamber of commerce Shivamogga ಶಿವಮೊಗ್ಗ ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್...

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...