DC Shivamogga ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಗಸ್ಟ್ 10 ರಂದು ಜಿಲ್ಲಾದ್ಯಂತ ‘ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನ’ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು 1 ರಿಂದ 19 ವರ್ಷದೊಳಗಿನ ಎಲ್ಲ ಮಕ್ಕಳು ಇದರ ಸದುಪಯೋಗಪಡೆಯಬೇಕೆಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು.
ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಜಂತು ಹುಳು ನಿವಾರಣೆ ದಿನ ಪೂರ್ವಭಾವಿ ಹಾಗೂ ರಾಷ್ಟ್ರೀಯ ವಾಹಕಗಳಿಂದ ಹರಡುವ ರೋಗ ನಿಯಂತ್ರಣ ಕಾರ್ಯಕ್ರಮ ಕುರಿತಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಂತು ಹುಳುಗಳ ಸೋಂಕಿನಿಂದ ದೇಹವು ಪೋಷಕಾಂಶಗಳನ್ನು ಸರಿಯಾಗಿ ಬಳಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಇದರಿಂದ ಮಕ್ಕಳಲ್ಲಿ ರಕ್ತಹೀನತೆ, ಅಪೌಷ್ಟಿಕತೆ ಹಾಗೂ ಕಲಿಕೆಯಲ್ಲಿ ಹಿಂದುಳಿಯುವಿಕೆ ಮುಂತಾದ ಆರೋಗ್ಯ ಸಮಸ್ಯೆಗಳು ಎದುರಾಗುತ್ತವೆ. ಆದ್ದರಿಂದ 1 ವರ್ಷದಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳು ಉಚಿತವಾಗಿ ನೀಡಲಾಗುವ ಆಲ್ಬೆಂಡಜೋಲ್ ಮಾತ್ರೆಗಳನ್ನು ತೆಗೆದುಕೊಳ್ಳಬೇಕು.
ಆಗಸ್ಟ್ 10 ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆಗಳು ಹಾಗೂ ಕಾಲೇಜುಗಳಲ್ಲಿ ಶಿಕ್ಷಕರು ಮಾತ್ರೆಗಳನ್ನು ನೀಡಲಿದ್ದಾರೆ. ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಆಶಾ ಕಾರ್ಯಕರ್ತೆಯರು ಮನೆ ಭೇಟಿ ನೀಡಿ ಮಾತ್ರೆ ವಿತರಿಸಲಿದ್ದಾರೆ ಎಂದು ತಿಳಿಸಿದರು.
ಆರ್‌ಸಿಹೆಚ್‌ಓ ಡಾ.ಓ.ಮಲ್ಲಪ್ಪ ಮಾತನಾಡಿ, ಮಣ್ಣಿನ ಮೂಲಕ ಹರಡುವ ಜಂತು ಹುಳುಗಳ ಸೋಂಕಿನಿಂದ ಪ್ರಪಂಚದಾದ್ಯಂತ 150 ಕೋಟಿ ಹಾಗೂ ಭಾರತದಲ್ಲಿ 22 ಕೋಟಿ ಜನರು ಬಾಧಿತರಾಗುತ್ತಿದ್ದಾರೆ. 2015 ರಲ್ಲಿ ಕರ್ನಾಟಕದಲ್ಲಿ 1 ರಿಂದ 19 ವರ್ಷದೊಳಗಿನ ಮಕ್ಕಳಲ್ಲಿ ಶೇಕಡಾ 49 ರಷ್ಟು ಜಂತು ಹುಳು ಬಾಧೆ ಕಂಡುಬಂದಿದೆ. ನಂತರ ಪ್ರತಿವರ್ಷ ವರ್ಷಕ್ಕೆ ಎರಡು ಬಾರಿ ಜಂತು ಹುಳು ನಿವಾರಣಾ ಮಾತ್ರೆ ನೀಡುತ್ತಾ ಬಂದಿದ್ದರಿಂದ, ಪ್ರಸ್ತುತ ಸೋಂಕಿನ ಪ್ರಮಾಣ ಶೇ. 0.22 ಕ್ಕೆ ಇಳಿಕೆಯಾಗಿದೆ.
ಆರೋಗ್ಯ ಸಮಸ್ಯೆ ಹಾಗೂ ಮುನ್ನೆಚ್ಚರಿಕೆ: ಸಾಮಾನ್ಯವಾಗಿ ವೈಯಕ್ತಿಕ ಸ್ವಚ್ಛತೆ ಇಲ್ಲದಿರುವುದು, ಬಯಲು ಮಲವಿಸರ್ಜನೆ, ಬರಿಗಾಲಿನಲ್ಲಿ ನಡೆಯುವುದು ಹಾಗೂ ಕಲುಷಿತ ನೀರು ಮತ್ತು ಆಹಾರದಿಂದ ಈ ಸೋಂಕು ಹರಡುತ್ತದೆ. ಇದನ್ನು ತಡೆಗಟ್ಟಲು ಕಾಲಕಾಲಕ್ಕೆ ಉಗುರುಗಳನ್ನು ಕತ್ತರಿಸಿಕೊಂಡು ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಕಡ್ಡಾಯವಾಗಿ ಶೌಚಾಲಯವನ್ನು ಬಳಸಬೇಕು ಹಾಗೂ ಕಾಲಿಗೆ ಚಪ್ಪಲಿ ಧರಿಸಬೇಕು. ಶೌಚಾಲಯ ಬಳಕೆಯ ನಂತರ ಮತ್ತು ಊಟಕ್ಕೆ ಮೊದಲು ಸೋಪಿನಿಂದ ಕೈಗಳನ್ನು ಚೆನ್ನಾಗಿ ತೊಳೆಯಬೇಕು.
DC Shivamogga ಮಾತ್ರೆ ವಿತರಣೆಯ ವಿವರ: ಆರೋಗ್ಯ ಇಲಾಖೆಯು 1 ವರ್ಷದಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಉಚಿತವಾಗಿ ಆಲ್ಬೆಂಡಾಜೋಲ್ ಮಾತ್ರೆಗಳನ್ನು ವಿತರಿಸಲಿದೆ. 1 ರಿಂದ 2 ವರ್ಷದೊಳಗಿನ ಮಕ್ಕಳಿಗೆ: ಅರ್ಧ (1/2) ಮಾತ್ರೆ, 2 ರಿಂದ 19 ವರ್ಷದೊಳಗಿನ ಮಕ್ಕಳಿಗೆ: 1 ಸಂಪೂರ್ಣ ಮಾತ್ರೆ ನೀಡಲಿದೆ.
2026-27ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 4,17,565 ಮಕ್ಕಳು ನೋಂದಣಿಯಾಗಿದ್ದಾರೆ. ಆಗಸ್ಟ್ 10 ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆಗಳು ಹಾಗೂ ಕಾಲೇಜುಗಳಲ್ಲಿ ಶಿಕ್ಷಕರು ಮಾತ್ರೆಗಳನ್ನು ನೀಡಲಿದ್ದಾರೆ. ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಆಶಾ ಕಾರ್ಯಕರ್ತೆಯರು ಮನೆ ಭೇಟಿ ನೀಡಿ ಮಾತ್ರೆ ವಿತರಿಸಲಿದ್ದಾರೆ.
ಆಗಸ್ಟ್ 10 ರಂದು ಮಾತ್ರೆ ತೆಗೆದುಕೊಳ್ಳಲು ಬಿಟ್ಟುಹೋದ ಫಲಾನುಭವಿಗಳಿಗೆ ಆಗಸ್ಟ್ 17 ರಂದು ನಡೆಯುವ ಮೋಪ್-ಅಪ್ ರೌಂಡ್‌ನಲ್ಲಿ ಮಾತ್ರೆ ನೀಡಿ, ಶೇ. 100 ರಷ್ಟು ಗುರಿ ಸಾಧನೆ ಮಾಡಲು ಇಲಾಖೆ ಸಿದ್ಧತೆ ಮಾಡಿಕೊಂಡಿದೆ.
ಜಿಲ್ಲೆಯ ಎಲ್ಲಾ ಮಕ್ಕಳ ಪೋಷಕರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡು ಜಂತು ಹುಳು ಮುಕ್ತ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕೆಂದು ಅವರು ಕೋರಿದರು.
ಲಾರ್ವಾ ಸಮೀಕ್ಷೆ ಮತ್ತು ಸ್ವಚ್ಚತೆಗೆ ಒತ್ತು : ಜಿಲ್ಲಾಧಿಕಾರಿಗಳು ಮಾತನಾಡಿ, ಜಿಲ್ಲೆಯಲ್ಲಿ ಸೊಳ್ಳೆಗಳಿಂದ ಹರಡುವ ಸೋಂಕುಗಳನ್ನು ತಡೆಗಟ್ಟಲು ಆರೋಗ್ಯ ಇಲಾಖೆ ಸಕ್ರಿಯವಾಗಿ ಕಾರ್ಯೋನ್ಮುಖವಾಗಬೇಕು. ಜೊತೆಗೆ ಸಾರ್ವಜನಿಕರು ಮನೆಯ ಸುತ್ತಮುತ್ತ ನೀರು ನಿಲ್ಲದಂತೆ, ಸ್ವಚ್ಚತೆ ಕಾಪಾಡಿಕೊಳ್ಳಬೇಕು. ತೀವ್ರ ಜ್ವರ, ತಲೆನೋವು, ಮೈಕೈ ನೋವು ಕಂಡುಬAದಲ್ಲಿ ತಕ್ಷಣ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಬೇಕು ಎಂದರು.
ಎನ್‌ವಿಬಿಡಿಸಿಪಿ ಅಧಿಕಾರಿ ಡಾ.ಗುಡದಪ್ಪ ಕಸಬಿ ಮಾತನಾಡಿ, ಡೆಂಗ್ಯು, ಚಿಕುನ್ ಗುನ್ಯ ಹಾಗೂ ಮಲೇರಿಯಾದಂತಹ ವಾಹಕಜನ್ಯ ರೋಗಗಳು ಸೊಳ್ಳೆಗಳಿಂದ ಹರಡುತ್ತಿದ್ದು ಇದನ್ನು ತಡೆಯಲು ಇಲಾಖೆಯು ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಲಾರ್ವಾ ಸಮೀಕ್ಷೆ ನಡೆಸಲಾಗುತ್ತಿದೆ.
DC Shivamogga ಮುಂಗಾರು ಮತ್ತು ನಂತರದ ಅವಧಿಯಲ್ಲಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಆರೋಗ್ಯ ಕಾರ್ಯಕರ್ತರು ಮನೆ ಮನೆ ತೆರಳಿ ತಪಾಸಣೆ ನಡೆಸುತ್ತಿದ್ದು ಸಾರ್ವಜನಿಕರು ಸಹಕರಿಸಬೇಕೆಂದರು.
ಸಾರ್ವಜನಿಕರು ತಮ್ಮ ಮನೆಯ ಸುತ್ತಮುತ್ತ ಎಲ್ಲೂ ನೀರು ನಿಲ್ಲದಂತೆ ಕ್ರಮ ವಹಿಸಬೇಕು. ಮನೆಯ ಅಂಗಳ, ಸಿಮೆಂಟ್ ತೊಟ್ಟಿಗಳು, ಒಡೆದ ಪ್ಲಾಸ್ಟಿಕ್ ವಸ್ತುಗಳು, ಕುಂಡಗಳು, ಏರ್ ಕೂಲರ್, ಡ್ರಮ್ ಗಳು, ಬಿಸಾಡಿದ ಟೈರ್‌ಗಳು ಹೀಗೆ ಇಂತಹ ತ್ಯಾಜ್ಯಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಇಂತಹ ನೀರಿನಲ್ಲಿಯೇ ಸೊಳ್ಳೆ ಲಾರ್ವಾಗಳು ಹೆಚ್ಚಾಗಿ ಕಂಡುಬರುವ ಕಾರಣ ನೀರನ್ನು ಖಾಲಿ ಮಾಡಿ ಮನೆ ಸುತ್ತಮುತ್ತ ಸ್ವಚ್ಚತೆ ಕಾಪಾಡಿಕೊಳ್ಳಬೇಕು ಎಂದರು.
ಸೊಳ್ಳೆ ಉತ್ಪತ್ತಿ ಕಡಿಮೆ ಮಾಡಲು ನೀರು ಸಂಗ್ರಹಣಾ ಮೂಲಗಳನ್ನು ವಾರಕ್ಕೊಮ್ಮೆ ಖಾಲಿ ಮಾಡಿ ಸ್ವಚ್ಚಗೊಳಿಸುವ ಮೂಲಕ ಪ್ರತಿಯೊಬ್ಬರು ಡ್ರೆöÊ ಡೇ ಆಚರಿಸಬೇಕು. ಇಲಾಖೆಯೊಂದಿಗೆ ಸಾರ್ವಜನಿಕರು ಸಕ್ರಿಯವಾಗಿ ಪಾಲ್ಗೊಂಡು ಸಹಕರಿಸಬೇಕು ಎಂದರು.
ಜನವರಿಯಿಂದ ಜುಲೈವರೆಗೆ ಜಿಲ್ಲೆಯಲ್ಲಿ ಡೆಂಗ್ಯು 3363 ಮಾದರಿ ಪರೀಕ್ಷೆ ಮಾಡಿದ್ದು 59 ಪಾಸಿಟಿವ್ ಬಂದಿದೆ.ಚಿಕುನ್‌ಗುನ್ಯ 1958 ಪರೀಕ್ಷೆ ಮಾಡಿಸಿದ್ದು 26 ಪಾಸಿಟಿವ್ ಬಂದಿದೆ. ಮಲೇರಿಯಾ 173504 ಪರೀಕ್ಷೆ ಮಾಡಿಸಿದ್ದು 12 ಪಾಸಿಟಿವ್ ಬಂದಿದೆ ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ಡಿಹೆಚ್‌ಓ ಡಾ. ನಟರಾಜ್, ಡಿಎಸ್‌ಓ ಡಾ.ನಾಗರಾಜ್ ನಾಯ್ಕ್, ಜಿಲ್ಲಾ ಕಾರ್ಯಕ್ರಮ ಅಧಿಕಾರಿಗಳು, ತಾಲ್ಲೂಕು ವೈದ್ಯಾಧಿಕಾರಿಗಳು ಹಾಜರಿದ್ದರು.
DC Shivamogga ಮುಂದಿನ 61 ವಾರಗಳಿಗೆ ಜಾನುವಾರುಗಳ ಅಗತ್ಯ ಮೇವಿಗೆ ಕೊರತೆಯಿಲ್ಲ : ಪ್ರಭುಲಿಂಗ ಕವಳಿಕಟ್ಟಿ
Date:
