Friday, September 25, 2026
Friday, September 25, 2026

ಸಚಿವ ಮಧು ಬಂಗಾರಪ್ಪ ಅವರ ಪ್ರವಾಸ: ಶಿವಮೊಗ್ಗ ಜಿಲ್ಲೆಯ ಅತಿವೃಷ್ಟಿ/ ಅನಾವೃಷ್ಟಿ ಪರಿಸ್ಥಿತಿ ಪರಿಶೀಲನೆ

Date:

ಕರ್ನಾಟಕ ಸರ್ಕಾರದ ಸಚಿವರಾದ ಎಸ್.ಮಧು ಬಂಗಾರಪ್ಪ ರವರು ಆಗಸ್ಟ್ 07 ರಿಂದ 09 ರವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಅತಿವೃಷ್ಠಿ/ ಅನಾವೃಷ್ಠಿ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.

ಆ. 07 ರಂದು ಬೆಳಗ್ಗೆ 10 ಕ್ಕೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಬಂಗಾರಧಾಮಕ್ಕೆ ಭೇಟಿ ನೀಡಲಿದ್ದಾರೆ ಹಾಗೂ ಸೊರಬದ ರಂಗಮಂದಿರದಲ್ಲಿ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ.

ಮಧ್ಯಾಹ್ನ 1.30 ಕ್ಕೆ ಸೊರಬ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ಹಾಗೂ ಸೊರಬ ಕ್ಷೇತ್ರ ವ್ಯಾಪ್ತಿಯ ಅತಿವೃಷ್ಠಿ /ಅನಾವೃಷ್ಠಿ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.

ಆ. 08 ರಂದು ಬೆಳಿಗ್ಗೆ 10 ಕ್ಕೆ ಶಿಕಾರಿಪುರ ತಾಲೂಕು ವ್ಯಾಪ್ತಿಯ ಅತಿವೃಷ್ಠಿ/ಅನಾವೃಷ್ಠಿ ಸಂಬಂಧ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಮಧ್ಯಾಹ್ನ 12.30 ಕ್ಕೆ ಶಿವಮೊಗ್ಗಕ್ಕೆ ಆಗಮಿಸಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶಿವಮೊಗ್ಗ ನಗರ ಮತ್ತು ಗ್ರಾಮಾಂತರ ತಾಲೂಕು ವ್ಯಾಪ್ತಿಯ ಅತಿವೃಷ್ಠಿ/ಅನಾವೃಷ್ಠಿ ಸಂಬಂಧ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಆ.09 ರಂದು ಬೆಳಿಗ್ಗೆ 9.30 ಕ್ಕೆ ತೀರ್ಥಹಳ್ಳಿ ತಾಲೂಕು ವ್ಯಾಪ್ತಿಯ ಇಂದಿರಾನಗರದ ಗುಡ್ಡ ಕುಡಿತದ ಸ್ಥಳ ಹಾಗೂ ಸಂತ್ರಸ್ಥರ ಮನೆಗೆ ಭೇಟಿ ನೀಡಲಿದ್ದಾರೆ. ಬೆ. 10.30 ಕ್ಕೆ ತೀರ್ಥಹಳ್ಳಿ ತಾಲೂಕು ವ್ಯಾಪ್ತಿಯ ಅತಿವೃಷ್ಠಿ/ಅನಾವೃಷ್ಠಿ ಸಂಬಂಧ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...