Wednesday, September 23, 2026
Wednesday, September 23, 2026

Breaking News ತೀರ್ಥಹಳ್ಳಿಯ ಬಾಳಗಾರು ಸನಿಹ ಕೆರೆಗೆ ಬಿದ್ದ ಕಾರು: ಈಜಿ ದಡ ಸೇರಿ ಬದುಕಿದ ಈರ್ವರು.

Date:

Breaking News ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬಾಳಗಾರು ಸಮೀಪ ಇಂದು ನಡೆದ ರಸ್ತೆ ಅಪಘಾತದಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಘಟನೆ ನಡೆದಿದೆ.

ಮಂಗಳೂರಿನಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಟಾಟಾ ನೆಕ್ಸಾನ್ ಕಾರು ಭಾರಿ ಮಳೆಯ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕೆರೆಗೆ ಬಿದ್ದಿದೆ ಎಂದು ತಿಳಿದುಬಂದಿದೆ.

Breaking News ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ಕೆರೆಯ ನೀರಿನಲ್ಲಿ ಮುಳುಗಿದ್ದು, ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಸಮಯಪ್ರಜ್ಞೆ ಪ್ರದರ್ಶಿಸಿ ಈಜಿಕೊಂಡು ಸುರಕ್ಷಿತವಾಗಿ ಹೊರಬಂದಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...