Friday, August 7, 2026
Friday, August 7, 2026

Car Accident ಸಿಗಂದೂರಿಗೆ ಹೊರಟ ಪ್ರವಾಸಿಗರ ಕಾರು ಚೋರಡಿ ಸೇತುವೆ ಬಳಿ ಪಲ್ಟಿ: ಆರು ಮಂದಿಗೆ ಗಾಯ.

Date:

Car Accident  ಶಿವಮೊಗ್ಗ ಜಿಲ್ಲೆಯ ಚೋರಡಿ ಬ್ರಿಡ್ಜ್ ಸಮೀಪ ಈ ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಸಿಗಂದೂರು ಚೌಡೇಶ್ವರಿ ದೇವಿಯ ದರ್ಶನಕ್ಕೆ ಒಂದೇ ಕಾರಿನಲ್ಲಿ ಹೊರಟಿದ್ದ ಆರು ಮಂದಿ ಸ್ನೇಹಿತರು ಪ್ರಯಾಣಿಸುತ್ತಿದ್ದರು.

ಈ ವೇಳೆ ರಸ್ತೆ ಬದಿಯ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ, ಕಾರು ಸತತ ಮೂರು ಬಾರಿ ಪಲ್ಟಿಯಾಗಿದೆ.

Car Accident  ಅಪಘಾತದಲ್ಲಿ ಕಾರಿನಲ್ಲಿದ್ದ ಎಲ್ಲಾ ಆರು ಮಂದಿಗೂ ಗಾಯಗಳಾಗಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನೂ ಅಪಘಾತ ಸಂಭವಿಸಿದ ಕ್ಷಣದಲ್ಲೇ ಸಾಗರ ಪೇಟೆ ಠಾಣೆಯ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ತಕ್ಷಣವೇ ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...

DC Shivamogga ಶಾಲೆ ತೊರೆದ, ಶಾಲಾ-ಕಾಲೇಜುಗಳಿಗೆ ಗೈರಾಗುವ ಹೆಣ್ಣುಮಕ್ಕಳ ಬಗ್ಗೆ ನಿಗಾವಹಿಸಿ- ಪ್ರಭುಲಿಂಗ ಕವಳಿಕಟ್ಟಿ.

DC Shivamogga ಶಾಲೆ ತೊರೆದ, ಶಾಲಾ-ಕಾಲೇಜಿಗೆ ಗೈರಾಗುವ ಹೆಣ್ಣುಮಕ್ಕಳ ಮೇಲೆ ನಿಗಾ ಇರಿಸಿ...