Wednesday, September 23, 2026
Wednesday, September 23, 2026

ಕನಿಷ್ಠ 25 ಎಕ್ರೆ ಭೂಮಿ ಲಭ್ಯವಾದರೆ ಶಿವಮೊಗ್ಗಕ್ಕೆ “ಫಿಲ್ಮ್ ಸಿಟಿ” ಯೋಜನೆ ಸಾಧ್ಯ -ಮೆಹಬೂಬ್ ಪಾಷ

Date:

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಸುಸಜ್ಜಿತ ‘ಶ್ರೀ ಕಂಠೀರವ ಸ್ಟುಡಿಯೋ’ ಶಾಖೆ ಹಾಗೂ ಕಿರು ಫಿಲ್ಮ್ ಸಿಟಿ (ಸ್ಮಾಲ್ ಫಿಲ್ಮ್ ಸಿಟಿ) ನಿರ್ಮಿಸುವ ಬಹುನಿರೀಕ್ಷಿತ ಯೋಜನೆಯ ಉದ್ದೇಶದಿಂದಾಗಿ ಸ್ಥಳ ಪರಿಶೀಲನೆ ಹಾಗೂ ಅಧಿಕಾರಿಗಳ ಉನ್ನತ ಮಟ್ಟದ ಸಭೆ ನಡೆಸಲಾಗಿದೆ ಎಂದು ಶ್ರೀ ಕಂಠೀರವ ಸ್ಟುಡಿಯೋ ಸಂಸ್ಥೆಯ ಅಧ್ಯಕ್ಷರಾದ ಮಹಬೂಬ್ ಪಾಷ ತಿಳಿಸಿದ್ದಾರೆ.

ಶಿವಮೊಗ್ಗ ತಾಲೂಕಿನ ತ್ಯಾಜುವಳ್ಳಿ ಗ್ರಾಮದ ಸರ್ವೆ ನಂಬರ್ 60 ಮತ್ತು 27 ರಲ್ಲಿರುವ ಜಮೀನಿನ ಜಂಟಿ ಪರಿಶೀಲನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಸತ್ಯನಾರಾಯಣ ಜಿ.ಎಸ್., ತಹಶೀಲ್ದಾರ್ ರಾಜೀವ್ ಕುಮಾರ್, ಉಪ ತಹಶೀಲ್ದಾರ್ ಸಂಧ್ಯಾ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿ ನಿಯೋಗವನ್ನು ಬರಮಾಡಿಕೊಂಡು ಸೂಕ್ತ ಮಾಹಿತಿ ನೀಡಲಾಗಿದೆ ಎಂದಿದ್ದಾರೆ.

ಸ್ಥಳ ಪರಿಶೀಲನೆಯ ಬಳಿಕ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಂದಾಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪರಿಶೀಲಿಸಿದ ತ್ಯಾಜುವಳ್ಳಿಯ ಜಮೀನು ಸ್ಟುಡಿಯೋ ಹಾಗೂ ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಂಪೂರ್ಣ ಸೂಕ್ತವಾಗಿದ್ದು ಯೋಜನೆಯ ಮುಂದಿನ ಪ್ರಕ್ರಿಯೆಗೆ ಚಾಲನೆ ನೀಡಲು ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.

ಫಿಲ್ಮ್ ಸಿಟಿ ಯೋಜನೆ: ಸ್ಟುಡಿಯೋಗಾಗಿ ಕನಿಷ್ಠ 25 ಎಕರೆ ಜಮೀನಿನ ಬೇಡಿಕೆ ಇಡಲಾಗಿದೆ. ಗರಿಷ್ಠ ಜಮೀನು ಲಭ್ಯವಾದರೆ ಸ್ಟುಡಿಯೋ ಜೊತೆಗೆ ಒಂದು ಬೃಹತ್ ‘ಕಿರು ಫಿಲ್ಮ್ ಸಿಟಿ’ ನಿರ್ಮಿಸಲು ಉದ್ದೇಶಿಸಲಾಗಿದೆ.

ಸ್ಥಳೀಯರಿಗೆ ಉದ್ಯೋಗಾವಕಾಶ: ಇದರಿಂದ ಮಲೆನಾಡು ಭಾಗದ ಸ್ಥಳೀಯ ಕಲಾವಿದರು ಮತ್ತು ತಂತ್ರಜ್ಞರಿಗೆ ವ್ಯಾಪಕ ಉದ್ಯೋಗ ಲಭಿಸಲಿದೆ. ಚಿತ್ರೀಕರಣಕ್ಕಾಗಿ ಪ್ರತಿಯೊಬ್ಬರೂ ಬೆಂಗಳೂರಿಗೆ ಅಲೆಯುವುದು ತಪ್ಪಲಿದ್ದು, ಸಮಯ ಹಾಗೂ ವೆಚ್ಚ ಉಳಿತಾಯವಾಗುವುದರ ಜೊತೆಗೆ ಶಿವಮೊಗ್ಗದ ಆರ್ಥಿಕತೆಗೆ ದೊಡ್ಡ ಬಲ ಸಿಗಲಿದೆ.

ತ್ಯಾಜುವಳ್ಳಿಯ ಪ್ರದೇಶವು ಹೊರಾಂಗಣ ಚಿತ್ರೀಕರಣಕ್ಕೆ ನೈಸರ್ಗಿಕ ಸೌಂದರ್ಯ ಹೊಂದಿದ್ದು, ಆಂತರಿಕ (ಇನ್ ಡೋರ್) ಸೆಟ್‌ಗಳನ್ನು ನಿರ್ಮಿಸಿದರೆ ಚಿತ್ರರಂಗಕ್ಕೆ ಒಂದೇ ಸೂರಿನಡಿ ಸಕಲ ಸೌಲಭ್ಯ ದೊರೆಯಲಿದೆ.

ಕಂದಾಯ ಇಲಾಖೆಯು ಶೀಘ್ರದಲ್ಲೇ ಜಮೀನು ಮಂಜೂರಾತಿ ಪ್ರಸ್ತಾವನೆಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಿದೆ. ತದನಂತರ ಡಿಸಿ ಅವರು ಅಂತಿಮ ಅನುಮೋದನೆಗಾಗಿ ಸರ್ಕಾರಕ್ಕೆ ಕಳುಹಿಸಿಕೊಡಲಿದ್ದಾರೆ ಎಂದು ಅಧ್ಯಕ್ಷರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...