Sunday, November 15, 2026
Sunday, November 15, 2026

D.K.Shivakumar ಹಿಂದಿನ ಸರ್ಕಾರ ಎಕ್ರೆಗೆ ₹ 25 ಲಕ್ಷ ನಿಗದಿ ಮಾಡಿತ್ತು.ನಮ್ಮ ಸರ್ಕಾರ ₹3 ಕೋಟಿ ಪರಿಹಾರ ನೀಡಲು ತೀರ್ಮಾನಿಸಿದೆ- ಸೀಎಂ ಡಿ.ಕೆ.ಶಿವಕುಮಾರ್

Date:

D.K.Shivakumar ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬಿಡದಿ ಟೌನ್‌ಶಿಪ್‌ ಯೋಜನೆಗೆ ಮರುಜೀವ ನೀಡಲಾಗುತ್ತಿದ್ದು, ಇದನ್ನು ವಿಶ್ವದರ್ಜೆಯ ರಸ್ತೆಗಳು, ಮೆಟ್ರೋ ಸಂಪರ್ಕ, ಅತ್ಯಾಧುನಿಕ ಕ್ರೀಡಾಂಗಣ, ಉದ್ಯಾನವನ ಹಾಗೂ ಸುಸಜ್ಜಿತ ವಸತಿ ಒಳಗೊಂಡ ಅತ್ಯಾಧುನಿಕ ಎಐ ಸಿಟಿಯಾಗಿ ಅಭಿವೃದ್ಧಿಪಡಿಸಲಾಗುತ್ತಿದೆ.
ಎಂದು GBDA ಯೋಜನೆ ಕುರಿತು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀಡಿ.ಕೆ.ಶಿವಕುಮಾರ್ ಅವರ ಸಂದೇಶ ಹೀಗಿದೆ.

ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಡಿಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ಈ ಬೃಹತ್ ಯೋಜನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಚಿತ್ರಣವನ್ನೇ ಬದಲಿಸಲಿದೆ.

D.K.Shivakumar ರೈತರ ಹಿತರಕ್ಷಣೆ ನಮ್ಮ ಪ್ರಮುಖ ಆದ್ಯತೆಯಾಗಿದೆ. ಹಿಂದಿನ ಸರ್ಕಾರ ಎಕರೆಗೆ ಕೇವಲ ₹25 ಲಕ್ಷ ನಿಗದಿಪಡಿಸಿದ್ದರೆ, ನಮ್ಮ ಸರ್ಕಾರ ಪ್ರತಿ ಎಕರೆಗೆ ₹3 ಕೋಟಿಗೂ ಹೆಚ್ಚು ಪರಿಹಾರ ನೀಡಲು ತೀರ್ಮಾನಿಸಿದೆ. ಹಣದ ಬದಲಾಗಿ ಭೂಮಿ ಬಯಸುವ ರೈತರಿಗೆ 50% ಅಭಿವೃದ್ಧಿಪಡಿಸಿದ ಜಾಗವನ್ನು ನೀಡಲಾಗುವುದು. ಈ ಭೂಸ್ವಾಧೀನ ಪ್ರಕ್ರಿಯೆಯು ಸಂಪೂರ್ಣವಾಗಿ ಐಚ್ಛಿಕವಾಗಿದ್ದು, ಯೋಜನೆಗೆ ಜಮೀನು ನೀಡಲು ಇಷ್ಟವಿಲ್ಲದ ಯಾರ ಮೇಲೆಯೂ ಯಾವುದೇ ಒತ್ತಾಯವಿರುವುದಿಲ್ಲ. ಯುವಜನತೆಗೆ ಅಪಾರ ಉದ್ಯೋಗಾವಕಾಶ ಸೃಷ್ಟಿಸಿ, ನಮ್ಮ ಅನ್ನದಾತರಿಗೆ ಗೌರವಯುತ ಜೀವನ ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ನಿಮ್ಮ ಸಹಕಾರವಿರಲಿ ಎಂದು ಮಾನ್ಯ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಂದೇಶದಲ್ಲಿ ಮನವಿ ಮಾಡಿದ್ದಾರೆ

–

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimul ಸಹಕಾರಿ ರತ್ನ ಪ್ರಶಸ್ತಿ – ನನ್ನ ಜೀವನದ ಸ್ಮರಣೀಯ ಗೌರವ- ವಿದ್ಯಾಧರ್.

Shimul ನನ್ನ ಸಹಕಾರ ಕ್ಷೇತ್ರದ ಸೇವೆ ಮತ್ತು ಕಾರ್ಯವನ್ನು ಗುರುತಿಸಿ ಪ್ರತಿಷ್ಠಿತ...

Shivamogga News ಶಿವಮೊಗ್ಗದಲ್ಲಿ ಬಿಗಿಭದ್ರತೆಯಿಂದ ಗೆಜೆಟೆಡ್ ಪ್ರೊಬೆಷನರ್ಸ್ ಪೂರ್ವಭಾವಿ ಪರೀಕ್ಷೆ ಆರಂಭ.

Shivamogga News ಶಿವಮೊಗ್ಗ ನಗರದಲ್ಲಿ ಇಂದು ಗೆಜೆಟೆಡ್ ಪ್ರೊಬೇಷನರ್ಸ್ (ಗ್ರೂಪ್...

Rotary Shivamogga ಮಕ್ಕಳನ್ನು ಸುಸಂಸ್ಕೃತರನ್ನಾಗಿಸಿ,ಜೀವನ ಕೌಶಲವನ್ನು ಕಲಿಸುವುದು ಅವಶ್ಯ- ಕೆ.ಬಿ.ರವಿಶಂಕರ್.

Rotary Shivamogga ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸುವುದರ ಜೊತೆಗೆ ಅವರಲ್ಲಿ ಆತ್ಮವಿಶ್ವಾಸ,...