Monday, August 10, 2026
Monday, August 10, 2026

ಮಾರ್ಗಮಧ್ಯೆ ಟೈರ್ ಕಳಚಿದ ಸಾರಿಗೆ ಬಸ್: ಅದೃಷ್ಟವಶಾತ್ ಪ್ರಯಾಣಿಕರೆಲ್ಲ ಸುರಕ್ಷಿತ

Date:

ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಿಂದ ಟಯರ್ ಕಳಚಿ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪ ನಡೆದಿದೆ.

ಉಡುಪಿಯಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ಆಗುಂಬೆ ಸಮೀಪ ಬರುತ್ತಿದ್ದಂತೆ ಏಕಾಏಕಿ ಬಸ್‌ನ ಟಯರ್ ಕಳಚಿ ಬಿದ್ದಿದೆ.

ಬಸ್‌ನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು. ಟಯರ್ ಕಳಚಿದ ತಕ್ಷಣವೇ ಚಾಲಕ ಸಮಯಪ್ರಜ್ಞೆ ಮೆರೆದು ಬಸ್‌ನ್ನು ನಿಲ್ಲಿಸಿದ್ದರಿಂದ ಭಾರೀ ಅನಾಹುತವೊಂದು ತಪ್ಪಿದೆ.

ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ತೊಂದರೆಯಾಗಿಲ್ಲ. ಯಾವುದೇ ಅವಘಡ ಸಂಭವಿಸದೆ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮುಂದೆ ಯಾವುದೇ ರೀತಿ ಭೂಕುಸಿತ ಆಗದಂತೆ ಮುನ್ನೆಚ್ಚರಿಕೆ ವಹಿಸಿ- ಸಚಿವ ಮಧು ಬಂಗಾರಪ್ಪ

Madhu Bangarappa ಇತ್ತೀಚಿಗೆ ಬಿದ್ದ ಭಾರಿ ಮಳೆಯಿಂದಾಗಿ ತೀರ್ಥಹಳ್ಳಿಯ ಗಾಂಧಿನಗರದಲ್ಲಿ ನಡುರಾತ್ರಿ...

Madhu Bangarappa ತೀರ್ಥಹಳ್ಳಿ ಬಳಿ ಗುಡ್ಡ ಕುಸಿತದಿಂದ ಸಾವಿನ ಅವಘಡ: ಸಚಿವ ಮಧು ಬಂಗಾರಪ್ಪ ಮೌಖಿಕ ಪರಿಶೀಲನೆ, ಪರಿಹಾರಕ್ಕೆ ಶೀಘ್ರ ಕ್ರಮ

Madhu Bangarappa ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ...

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...