Friday, September 11, 2026
Friday, September 11, 2026

ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ತಕ್ಷಣ ತಾತ್ಕಾಲಿಕ ವ್ಯವಸ್ಥೆ ಮಾಡಿ- ಎಸ್.ಎನ್.ಚನ್ನಬಸಪ್ಪ.

Date:

ಶಿವಮೊಗ್ಗ ನಗರದ ಹೊರವಲಯದಲ್ಲಿರುವ ಕಲ್ಲೂರು ಮಂಡ್ಲಿ ಬಡಾವಣೆಯ ನಿವಾಸಿಗಳು ಎದುರಿಸುತ್ತಿರುವ ವಿವಿಧ ಮೂಲಸೌಕರ್ಯ ಸಮಸ್ಯೆಗಳು ಹಾಗೂ ಮುಖ್ಯವಾಗಿ ಕುಡಿಯುವ ನೀರಿನ ತೀವ್ರ ಅಭಾವದ ಕುರಿತು ಶಿವಮೊಗ್ಗ ನಗರ ಶಾಸಕರಾದ ಶ್ರೀ ಎಸ್. ಎನ್. ಚನ್ನಬಸಪ್ಪ (ಚೆನ್ನಿ) ಅವರು ಇಂದು ಸಂಬಂಧಪಟ್ಟ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಡಾವಣೆಯ ನಿವಾಸಿಗಳೊಂದಿಗೆ ಚರ್ಚಿಸಿದ ಶಾಸಕರು, ದಿನನಿತ್ಯದ ಚಟುವಟಿಕೆಗಳಿಗೆ ಕುಡಿಯುವ ನೀರಿಲ್ಲದೆ ನಿವಾಸಿಗಳು ಅನುಭವಿಸುತ್ತಿರುವ ಕಷ್ಟಗಳನ್ನು ಆಲಿಸಿದರು. ತಕ್ಷಣವೇ ಕಾರ್ಯಪ್ರವೃತ್ತರಾದ ಅವರು, ಸ್ಥಳದಲ್ಲಿದ್ದ ಮಹಾನಗರ ಪಾಲಿಕೆ ಹಾಗೂ ನೀರು ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿ, “ಸಾರ್ವಜನಿಕರಿಗೆ ಯಾವುದೇ ಕಾರಣಕ್ಕೂ ನೀರಿನ ತೊಂದರೆಯಾಗದಂತೆ ತಕ್ಷಣವೇ ತಾತ್ಕಾಲಿಕ ವ್ಯವಸ್ಥೆ ಮಾಡಬೇಕು. ಜೊತೆಗೆ ಬಡಾವಣೆಗೆ ಶಾಸ್ಯತ ಕುಡಿಯುವ ನೀರಿನ ಯೋಜನೆ ರೂಪಿಸಿ ಶೀಘ್ರ ಕಾಮಗಾರಿ ಆರಂಭಿಸಬೇಕು” ಎಂದು ನಿರ್ದೇಶಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ವಿಜಯೇಂದ್ರ, ಯಶೋದಮ್ಮ, 8ನೇ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ, ಸ್ಥಳೀಯ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಕಲ್ಲೂರು ಮಂಡ್ಲಿ ಬಡಾವಣೆಯ ನೂರಾರು ನಿವಾಸಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...