ಹೆಮ್ಮೆಯ ಪ್ರಧಾನಮಂತ್ರಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜೀ ರವರ ‘ನಶೆ ಮುಕ್ತ ಭಾರತ’ ನಿರ್ಮಾಣದ ಕರೆಗೆ ಬೆಂಬಲವಾಗಿ, ಶಿಕಾರಿಪುರದ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ಹಾಗೂ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ಇಂದು ಆಯೋಜಿಸಲಾಗಿದ್ದ ಪೋಸ್ಟರ್ ಬಿಡುಗಡೆ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಶಿವಮೊಗ್ಗ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕರಾದ ರಾಜಯೋಗಿನಿ ಬ್ರಹ್ಮಕುಮಾರಿ ಅನುಸೂಯಕ್ಕನವರು ಹಾಗೂ ರಾಜಯೋಗಿನಿ ಬ್ರಹ್ಮಕುಮಾರಿ ಸ್ನೇಹಕ್ಕನವರು ಸಾನ್ನಿಧ್ಯ ವಹಿಸಿ, ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಯುವಜನರೇ ನಮ್ಮ ದೇಶದ ನಿಜವಾದ ಶಕ್ತಿ. ದುಷ್ಟ ಚಟಗಳಿಂದ ದೂರವಿದ್ದು, ಆರೋಗ್ಯಕರ ಹಾಗೂ ಸುದೃಢ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬ ವಿದ್ಯಾರ್ಥಿ ವಿದ್ಯಾರ್ಥಿನಿಯೂ ದೃಢಸಂಕಲ್ಪ ತೊಡುವ ಮೂಲಕ ಪ್ರಧಾನಿಗಳ ವಿಕಸಿತ ಭಾರತದ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಜೊತೆಯಾಗಿ ಮುನ್ನಡೆಯಬೇಕಿದೆ.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ. ಶಿವಕುಮಾರ್, ಡಾ. ವೀರೇಂದ್ರ, ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಶ್ರೀ ಕೆ.ಎಸ್.ಗುರುಮೂರ್ತಿ ಮತ್ತಿತರ ಗಣ್ಯರು ಪಾಲ್ಗೊಂಡಿದ್ದರು.
