Friday, September 11, 2026
Friday, September 11, 2026

ಮೈಸೂರು ವಿವಿಯ ಎಂ.ವಿ‌.ಎ./ಬಿ.ವಿ.ಎ. ಪದವಿ ಅಧ್ಯಯನಕ್ಕೆ ಪ್ರವೇಶಾತಿಗೆ ಅರ್ಜಿ ಆಹ್ವಾನ

Date:

ಮೈಸೂರು ವಿಶ್ವವಿದ್ಯಾನಿಲಯವು 2026-27 ನೇ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷದ ಎಂ.ವಿ.ಎ ಸ್ನಾತಕೋತ್ತರ ಪದವಿ ಪ್ರವೇಶಾತಿಗಾಗಿ ಬಿ.ವಿ.ಎ/ಸಮಾನಾಂತರ ಕೋರ್ಸುಗಳಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಎಂ.ವಿ.ಎ.ಸ್ನಾತಕೋತ್ತರ ಪದವಿಯು ದೃಶ್ಯಕಲೆಯಲ್ಲಿ ಎರಡು ವರ್ಷಗಳ ನಾಲ್ಕು ಸೆಮಿಸ್ಟರ್ “ಸಿಬಿಸಿಎಸ್”, ಪದ್ಧತಿಯ ಕೋರ್ಸು ಆಗಿದ್ದು, ಈ ಸ್ನಾತಕೋತ್ತರ ಪದ್ಧತಿಯು ಚಿತ್ರಕಲೆ, ಶಿಲ್ಪಕಲೆ ಮತ್ತು ಅಚ್ಚುಕಲೆ ವಿಷಯಗಳಲ್ಲಿ ವಿಶೇಷ ಅಧ್ಯಯನವನ್ನು ಒಳಗೊಂಡಿರುತ್ತದೆ.
ಅರ್ಜಿಗಳನ್ನು ಕಛೇರಿ ವೇಳೆಯಲ್ಲಿ ಪಡೆಯಬಹುದಾಗಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಆ.17 ರೊಳಗಾಗಿ ಸಲ್ಲಿಸುವುದು.
ಪ್ರವೇಶಾತಿ ಕೋರಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹತಾ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನದ ದಿನಾಂಕ: 18-08-2026 ಆಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0821-2438931 ಮೂಲಕ ಕಛೇರಿ ಅವಧಿಯಲ್ಲಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S. N. Channabasappa ಶಿವಮೊಗ್ಗದ ವಿವಿಧ ಬಡಾವಣೆಗಳಲ್ಲಿ ಶಾಸಕ ” ಚೆನ್ನಿ” ಅವರಿಂದ ಕಾಮಗಾರಿಗಳಿಗೆ ಭೂಮಿ ಪೂಜೆ

S. N. Channabasappa ಶಿವಮೊಗ್ಗ ನಗರದ ಪ್ರತಿಯೊಂದು ವಾರ್ಡ್ ಹಾಗೂ ಬಡಾವಣೆಗಳಲ್ಲಿ...

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...