Tuesday, August 11, 2026
Tuesday, August 11, 2026

ಪಿಸಿಆರ್ ಕಾಯ್ದೆ ಕುರಿತು ಅರಿವು ಕಾರ್ಯಕ್ರಮ ನೀಡಲು ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನ

Date:

ಸಮಾಜ ಕಲ್ಯಾಣ ಇಲಾಖೆಯು 2026-27ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಅಧಿನಿಯಮ ಮತ್ತು ಪಿಸಿಆರ್ ಕಾಯ್ದೆಯ ಬಗ್ಗೆ ಪ.ಜಾ. ಮತ್ತು ವರ್ಗದ ಸಂಘ/ಸಂಸ್ಥೆಗಳು ಸೇರಿದಂತೆ ವಿವಿಧ ಸ್ವಯಂ ಸೇವಾ ಸಂಘ/ಸಂಸ್ಥೆಗಳ ಸಹಯೋಗ/ಸಮನ್ವಯದೊಂದಿಗೆ ವಿಚಾರಗೋಷ್ಠಿ, ಕಾರ್ಯಾಗಾರ ಮತ್ತು ಇತರೆ ಕಾರ್ಯಕ್ರಮಗಳನ್ನು ಜಿಲ್ಲಾ, ತಾಲೂಕು, ಹೋಬಳಿ ಮತ್ತು ಗ್ರಾಮ ಮಟ್ಟದಲ್ಲಿ ಆಯೋಜಿಸಲು ಆಸಕ್ತ ಸಂಘ/ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಸ್ವಯಂ ಸೇವಾ ಸಂಘ/ಸಂಸ್ಥೆಗಳು ನಿಗಧಿತ ನಮೂನೆ ಅರ್ಜಿಯನ್ನು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಕಚೇರಿ ಅಥವಾ ತಾಲೂಕುಗಳಲ್ಲಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸಂಘ/ಸಂಸ್ಥೆಯ ನೋಂದಣಿ ಪ್ರಮಾಣ ಪತ್ರ ಮತ್ತು ನವೀಕರಣ ಪ್ರಮಾಣ ಪತ್ರ, ಕಳೆದ 3 ವರ್ಷಗಳ ಆಡಿಟ್ ವರದಿ, ಸಂಘ/ಸಂಸ್ಥೆಯು ಪ.ಜಾ/ಪ.ವ.ದ ಅಭಿವೃದ್ಧಿಗಾಗಿ 5 ವರ್ಷ ಸೇವೆ ಸಲ್ಲಿಸಿರುವ ಬಗ್ಗೆ ದೃಢೀಕೃತ ದಾಖಲೆ, ಈ ಹಿಂದೆ ಅರಿವು/ಜಾಗೃತಿ ಮೂಡಿಸುವ ಕಾರ್ಯಕ್ರಮ ಆಯೋಜಿಸಿರುವ ಬಗ್ಗೆ ದಾಖಲೆಗಳು/ಛಾಯಾಚಿತ್ರ/ಪತ್ರಿಕಾ ವರದಿ, ಸಂಸ್ಥೆಯು ದೌರ್ಜನ್ಯ ಪ್ರತಿಬಂಧ ಅಧಿನಿಯಮ-1989ರ ಅನುಷ್ಟಾನದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿರುವ ಬಗ್ಗೆ ದಾಖಲೆಗಳು, ಪ್ರಕಟಣೆಗಳು, ಕರಪತ್ರ, ಭಿತ್ತಿ ಪತ್ರ ಇತ್ಯಾದಿಗಳನ್ನು ಲಗತ್ತಿಸಿ ಆ. 21ರೊಳಗಾಗಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...