Friday, September 11, 2026
Friday, September 11, 2026

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Date:

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ ನಾನು ಮಾತನಾಡಿದಾಗೆಲ್ಲಾ, ಶಿಕ್ಷಕರ ನೇಮಕ ಯಾವಾಗ ಎಂದು ಎಲ್ಲರೂ ನನ್ನನ್ನು ಕೇಳುತ್ತಿದ್ದರು. ಆದರೆ ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆ ತರುವ ಉದ್ದೇಶ ಹೊಂದಿದ್ದ ನಮ್ಮ ಸರ್ಕಾರ, ಶಿಕ್ಷಕರ ನೇಮಕದಲ್ಲಿಯೂ ಕೆಲ ಮಾರ್ಪಾಡು ಮಾಡಲು ನಿರ್ಧರಿಸಿತ್ತು. ಅಲ್ಲದೇ ಒಳ ಮೀಸಲಾತಿ ಜಾರಿ, ನ್ಯಾಯಾಲಯದ ತಡೆಯಾಜ್ಞೆ ಮತ್ತಿತರ ಕಾರಣಕ್ಕೆ ನೇಮಕ ಪ್ರಕ್ರಿಯೆ ಆರಂಭಿಸುವುದು ತಡವಾಗಿತ್ತು. ಆದರೆ ಈಗ ನೇಮಕ ಪ್ರಕ್ರಿಯೆಯನ್ನು ನಾವು ಆರಂಭಿಸಿದ್ದೇವೆ. ನಾನು ಈ ಹಿಂದೆ ಹೇಳುತ್ತಿದ್ದಂತೆಯೇ 15 ಸಾವಿರ ಶಿಕ್ಷಕರ ನೇಮಕಕ್ಕೆ ಚಾಲನೆ ನೀಡಲಾಗಿದೆ. ಇದರಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ 6,967 ಹುದ್ದೆಗಳು ಮೀಸಲಾಗಿವೆ. 8,033 ಹುದ್ದೆಗಳು ಉಳಿಕೆ ಮೂಲ ವೃಂದದ ಹುದ್ದೆಗಳಾಗಿವೆ. ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರನ್ನು, ಗಣಕ ವಿಜ್ಞಾನ ಶಿಕ್ಷಕರನ್ನು, ದೈಹಿಕ ಶಿಕ್ಷಣ ಶಿಕ್ಷಕರನ್ನು (ಗ್ರೇಡ್‌I ಮತ್ತು ಗ್ರೇಡ್‌II), ಪ್ರೌಢ ಶಾಲಾ ಸಹ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.
ಶೈಕ್ಷಣಿಕ ಜಿಲ್ಲಾವಾರು ಖಾಲಿ ಇರುವ ಹುದ್ದೆಗಳಿಗೆ ಪ್ರತ್ಯೇಕ ಅಧಿಸೂಚನೆ ಹೊರಡಿಸಿ, ನೇಮಕ ಮಾಡಿಕೊಳ್ಳಲು ನಿರ್ಧರಿಸಿದ್ದೇವೆ. ದಿನಾಂಕ 18-08-2026 ರಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತದೆ. Madhu Bangarappa ಈಗಾಗಲೇ ಅಧಿಸೂಚನೆಯನ್ನು ಸರ್ಕಾರ ಇ-ರಾಜ್ಯಪಾತ್ರ ವೆಬ್‌ಸೈಟ್‌ನಲ್ಲಿ(www.erajyapatra.karnataka.gov.in) ಅಧಿಕೃತವಾಗಿ ಪ್ರಕಟಿಸಿದ್ದೇವೆ. ನಿಮ್ಮ ಜಿಲ್ಲೆಯಲ್ಲಿ ಯಾವೆಲ್ಲಾ ಶಿಕ್ಷಕರ ಹುದ್ದೆಗಳಿಗೆ ನೇಮಕ ನಡೆಯುತ್ತಿದೆ, ಎಷ್ಟು ಹುದ್ದೆಗಳಿವೆ, ಮೀಸಲಾತಿ ಹಂಚಿಕೆ, ನೇಮಕದಲ್ಲಿ ಆಗಿರುವ ಬದಲಾವಣೆಗಳೇನೇನು ಎಂಬೆಲ್ಲಾ ಮಾಹಿತಿಯನ್ನು ನೀವು ಈ ಅಧಿಸೂಚನೆಗಳಿಂದ ಪಡೆದುಕೊಳ್ಳಬಹುದು. ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗೆ ವೆಬ್‌ ಸೈಟ್‌: https://schooleducation.kar.nic.in
ಪಾರದರ್ಶಕವಾಗಿ ಮತ್ತು ಯಾವುದೇ ಗೊಂದಲವಿಲ್ಲದಂತೆ ಈ ನೇಮಕ ಪ್ರಕ್ರಿಯೆ ನಡೆಸಲು ಈಗಾಗಲೇ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆಯನ್ನು ನೀಡಿದ್ದೇನೆ. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುಲು ನಮ್ಮ ಕಾಂಗ್ರೆಸ್‌ ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಇದೊಂದು ಮಹತ್ವದ ಹೆಜ್ಜೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S. N. Channabasappa ಶಿವಮೊಗ್ಗದ ವಿವಿಧ ಬಡಾವಣೆಗಳಲ್ಲಿ ಶಾಸಕ ” ಚೆನ್ನಿ” ಅವರಿಂದ ಕಾಮಗಾರಿಗಳಿಗೆ ಭೂಮಿ ಪೂಜೆ

S. N. Channabasappa ಶಿವಮೊಗ್ಗ ನಗರದ ಪ್ರತಿಯೊಂದು ವಾರ್ಡ್ ಹಾಗೂ ಬಡಾವಣೆಗಳಲ್ಲಿ...

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...