Friday, September 11, 2026
Friday, September 11, 2026

ಆಗಸ್ಟ್ 13 ರಿಂದ ಜಿಲ್ಲೆಯ ಆದಿವಾಸಿ ಕೇಂದ್ರಗಳಲ್ಲಿ ” ಜನ್ ಸುನ್ವಾಯಿ” ಕಾರ್ಯಕ್ರಮ

Date:

ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯದ “ಧರ್ತಿ ಆಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನ್” ಯೋಜನೆಯಡಿ ಶಿವಮೊಗ್ಗ ತಾಲೂಕಿನ ಮುದ್ದಿನಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ವಿರುಪಿನಕೊಪ್ಪ ಹಾಗೂ ಬಿ.ಬೀರನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸದಾಶಿವಪುರ ಗ್ರಾಮಗಳ ಅಂಗನವಾಡಿ ಕೇಂದ್ರಗಳಲ್ಲಿ ‘ಆದಿ ಸೇವಾ ಕೇಂದ್ರ’ಗಳನ್ನು ಸ್ಥಾಪಿಸಲಾಗಿದೆ.
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಈ ಕೇಂದ್ರಗಳಲ್ಲಿ ಆಗಸ್ಟ್ 13 ರಿಂದ 15 ರವರೆಗೆ
ಜನ್ ಸುನ್ವಾಯಿ(“Jan Sunwai” )ಎಂಬ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ತಿಳಿಸಿದ್ದಾರೆ. ಬುಡಕಟ್ಟು ಸಮುದಾಯದ ಜನರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಪ್ರಯೋಜನಗಳನ್ನು ತಲುಪಿಸುವುದು ಮತ್ತು ಅದಕ್ಕೆ ಬೇಕಾಗುವ ಅಗತ್ಯ ದಾಖಲೆಗಳನ್ನು ಒದಗಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.
ಈ ಕಾರ್ಯಕ್ರಮಕ್ಕಾಗಿ ಜಿಲ್ಲೆಯ 17 ವಿವಿಧ ಇಲಾಖೆಗಳು ಒಟ್ಟಾಗಿ ಕೆಲಸ ಮಾಡಲಿದ್ದು, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಆಯುಷ್ಮಾನ್ ಕಾರ್ಡ್, ಜಾತಿ ಪ್ರಮಾಣ ಪತ್ರ, ನಿವಾಸ ಪ್ರಮಾಣ ಪತ್ರ, ಕಿಸಾನ್ ಕ್ರೆಡಿಟ್ ಕಾರ್ಡ್ , ಜನಧನ್ ಬ್ಯಾಂಕ್ ಖಾತೆ, ವಿಮಾ ಯೋಜನೆಗಳು, ಉದ್ಯೋಗ ಖಾತ್ರಿ ಕಾರ್ಡ್‌ಗಳು ಹಾಗೂ ಇತರ ಮೂಲಭೂತ ಸೌಲಭ್ಯಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಬಹುದು.
ಮೇಲ್ಕಂಡ ಗ್ರಾಮಗಳ ಗ್ರಾಮಸ್ಥರು ತಮ್ಮ ದೂರು ಹಾಗೂ ಅಹವಾಲುಗಳನ್ನು ನಿಗದಿತ ನಮೂನೆಯಲ್ಲಿ ವಿರುಪಿನಕೊಪ್ಪ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಮುದಾಯ ಭವನದಲ್ಲಿರುವ ಸ್ವಯಂ ಸೇವಕರಾದ ಮೂರ್ತಿ ಅವರಿಗೆ ಹಾಗೂ
ಸದಾಶಿವಪುರ ಗ್ರಾಮದಲ್ಲಿ ಅಂಗನವಾಡಿ ಕೇಂದ್ರದಲ್ಲಿರುವ ಸ್ವಯಂ ಸೇವಕರಾದ ಸಾಯಿಕುಮಾರ್ ಬಿ ಅವರಿಗೆ ಸಲ್ಲಿಸಬಹುದಾಗಿದ್ದು, ಸಂಬಂಧಿಸಿದ ಗ್ರಾಮಸ್ಥರು ಈ ವಿಶೇಷ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಳ್ಳಬೇಕಾಗಿ ಜಿಲ್ಲಾಧಿಕಾರಿಗಳು ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S. N. Channabasappa ಶಿವಮೊಗ್ಗದ ವಿವಿಧ ಬಡಾವಣೆಗಳಲ್ಲಿ ಶಾಸಕ ” ಚೆನ್ನಿ” ಅವರಿಂದ ಕಾಮಗಾರಿಗಳಿಗೆ ಭೂಮಿ ಪೂಜೆ

S. N. Channabasappa ಶಿವಮೊಗ್ಗ ನಗರದ ಪ್ರತಿಯೊಂದು ವಾರ್ಡ್ ಹಾಗೂ ಬಡಾವಣೆಗಳಲ್ಲಿ...

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...