Friday, September 11, 2026
Friday, September 11, 2026

ಆಗಸ್ಟ್ 27 ರಿಂದ ಕೆನರಾ ಬ್ಯಾಂಕ್ ಉದ್ಯೋಗ ತರಬೇತಿ ಕೇಂದ್ರದಲ್ಲಿ ಸಿಸಿಟಿವಿ ಸರ್ವೀಸಿಂಗ್ ಉಚಿತ ತರಬೇತಿ

Date:

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಆ 27 ರಿಂದ 13 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಉಚಿತ ಸಿಸಿಟಿವಿ ಅಳವಡಿಕೆ ಮತ್ತು ಸರ್ವೀಸಿಂಗ್ ತರಬೇತಿ ಶಿಬಿರವನ್ನು ಏರ್ಪಡಿಸಿದೆ.

ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 49 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ
ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.

ಆಸಕ್ತಿಯುಳ್ಳ ಅಭ್ಯರ್ಥಿಗಳು ದಿನಾಂಕ: 20/08/2026 ಗುರುವಾರ ಬೆಳಗ್ಗೆ 9.30 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ಸಂದರ್ಶನಕ್ಕೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬೇಕಾಗಿ ಈ ಮೂಲಕ ಸೂಚಿಸಲಾಗಿದೆ. ಸಂದರ್ಶನಕ್ಕೆ ಹಾಜರಾಗಲು ಅಸಾಧ್ಯವಾದಲ್ಲಿ ದಿನಾಂಕ: 20/08/2026 ರೊಳಗೆ ಸಂಸ್ಥೆಯನ್ನು ಈ ಕೆಳಕಂಡ ದೂರವಾಣಿ ಸಂಖ್ಯೆ 8970476050, 9591514154, 6363139123, 9686248369, 9886935603 ಗಳಿಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದೆಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S. N. Channabasappa ಶಿವಮೊಗ್ಗದ ವಿವಿಧ ಬಡಾವಣೆಗಳಲ್ಲಿ ಶಾಸಕ ” ಚೆನ್ನಿ” ಅವರಿಂದ ಕಾಮಗಾರಿಗಳಿಗೆ ಭೂಮಿ ಪೂಜೆ

S. N. Channabasappa ಶಿವಮೊಗ್ಗ ನಗರದ ಪ್ರತಿಯೊಂದು ವಾರ್ಡ್ ಹಾಗೂ ಬಡಾವಣೆಗಳಲ್ಲಿ...

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...