Friday, September 11, 2026
Friday, September 11, 2026

ವಿಜಯ ನಗರ ಜಿಲ್ಲಾ ಉಸ್ತುವಾರಿ ಬೇಡ: ಸ್ವಾತಂತ್ರ್ಯೋತ್ಸವ ಧ್ವಜಾರೋಹಣಕ್ಕೆ ಹಾಜರಾಗಲು ಸಾಧ್ಯವಾಗದು- ಸಚಿವ ಜಮೀರ್ ಅಹಮದ್

Date:

ವಸತಿ ಇಲಾಖೆಯ ಸಚಿವ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಬಿ.ಝಡ್. ಜಮೀರ್ ಅಹಮದ್ ಖಾನ್ ಅವರು, ಆಗಸ್ಟ್ 15ರಂದು ವಿಜಯನಗರ ಜಿಲ್ಲೆಯಲ್ಲಿ ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಹೊಣೆಗಾರಿಕೆಯಿಂದ ವಿನಾಯಿತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಆಗಸ್ಟ್ 11ರಂದು ತಮ್ಮನ್ನು ವಿಜಯನಗರ ಜಿಲ್ಲೆಯಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣದ ಹೊಣೆಗಾರಿಕೆಗೆ ನಿಯೋಜಿಸಿರುವುದು ತಿಳಿದಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿರುವ ಜಮೀರ್ ಅಹಮದ್, ಮುಂದಿನ ದಿನಗಳಲ್ಲಿ ಬಿಬಿಎಂಪಿ ಸೇರಿದಂತೆ ಹಲವು ಸ್ಥಳೀಯ ಸಂಸ್ಥೆಗಳ ಚುನಾವಣೆಗಳು, ವಿಧಾನಸಭಾ ಉಪಚುನಾವಣೆ ಹಾಗೂ ಪಕ್ಷ ಸಂಘಟನೆಯ ಜವಾಬ್ದಾರಿಗಳ ಹಿನ್ನೆಲೆಯಲ್ಲಿ ಸಮಯದ ಅಭಾವ ಎದುರಾಗಲಿದೆ ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ರಾಜ್ಯದ ಯಾವುದೇ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿಯನ್ನು ನೀಡದಂತೆ ಈಗಾಗಲೇ ಮುಖ್ಯಮಂತ್ರಿಗಳಿಗೆ ಮನವಿ ಮಾಡಿರುವುದಾಗಿ ಅವರು ಹೇಳಿದ್ದಾರೆ.

ಇದರ ಮುಂದುವರಿದ ಭಾಗವಾಗಿ, ಆಗಸ್ಟ್ 15ರಂದು ವಿಜಯನಗರ ಜಿಲ್ಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣದ ಹೊಣೆಗಾರಿಕೆ ನೀಡಲಾಗಿದ್ದು, ತಾವು ಹಾಜರಾಗಲು ಸಾಧ್ಯವಾಗದ ಕಾರಣ ಈ ಜವಾಬ್ದಾರಿಯಿಂದ ವಿನಾಯಿತಿ ನೀಡುವಂತೆ ಮುಖ್ಯಮಂತ್ರಿಗಳಿಗೆ ಕೋರಿದ್ದಾರೆ.

ಇದೇ ವೇಳೆ, ವಿಜಯನಗರ ಜಿಲ್ಲೆಯಲ್ಲಿ ಬರ ಪರಿಸ್ಥಿತಿಯನ್ನು ಅಧ್ಯಯನ ಮಾಡಿ ವರದಿ ಸಲ್ಲಿಸುವ ಹೊಣೆಗಾರಿಕೆ ನೀಡಲಾಗಿತ್ತು. ಈ ಸಂಬಂಧ ಈಗಾಗಲೇ ವರದಿಯನ್ನು ಸಲ್ಲಿಸಿರುವುದಾಗಿ ಜಮೀರ್ ಅಹಮದ್ ಪತ್ರದಲ್ಲಿ ತಿಳಿಸಿದ್ದಾರೆ.

ಆದರೆ, ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಿಲ್ಲೆಯ ಪ್ರಮುಖ ಸರ್ಕಾರಿ ಸಭೆ, ಸಮಾರಂಭಗಳಲ್ಲಿ ಸಚಿವರ ಹಾಜರಿ ಮಹತ್ವದ್ದಾಗಿದ್ದು, ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣದಂತಹ ಪ್ರಮುಖ ಕರ್ತವ್ಯದಿಂದ ಸಚಿವರು ವಿನಾಯಿತಿ ಕೋರಿರುವುದು ಇದೀಗ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಮುಖ್ಯಮಂತ್ರಿಗಳೇ ವಹಿಸಿರುವ ಹೊಣೆಗಾರಿಕೆಗೆ ಸಚಿವರು ಗೈರಾಗಲು ಮನವಿ ಮಾಡಿರುವುದು ಸರಿಯೇ? ಧ್ವಜಾರೋಹಣದಂತಹ ಮಹತ್ವದ ಕರ್ತವ್ಯವನ್ನು ಸಚಿವರು ನಿರಾಕರಿಸಬಹುದೇ? ಎಂಬ ಪ್ರಶ್ನೆಗಳು ಇದೀಗ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...