Saturday, August 15, 2026
Saturday, August 15, 2026

ಪಿಎಂ-ಕಿಸಾನ್ ಪ್ರೋತ್ಸಾಹಧನ ಪಡೆಯಲು ಬಯೋಮೆಟ್ರಿಕ್ಇ-ಕೆವೈಸಿ ಕಡ್ಡಾಯ- ಕಿರಣ್ ಕುಮಾರ್

Date:

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ ಕಿಸಾನ್) ಯೋಜನೆಯಡಿ ಪ್ರೋತ್ಸಾಹಧನ ಮುಂದುವರಿಸಲು ಅರ್ಹ ರೈತರು ಪ್ರತಿ ವರ್ಷ ಬಯೋಮೆಟ್ರಿಕ್ ಇ-ಕೆವೈಸಿ ಮಾಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಶಿವಮೊಗ್ಗ ಜಂಟಿ ಕೃಷಿ ನಿರ್ದೇಶಕ ಕಿರಣ್ ಕುಮಾರ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 01-02-2019ವರ ಪೂರ್ವದಲ್ಲಿ ಭೂ ಒಡೆತನ ಹೊಂದಿರುವ ಸಣ್ಣ, ಅತಿ ಸಣ್ಣ, ಮಧ್ಯಮ ಹಾಗೂ ದೊಡ್ಡ ರೈತ ಕುಟುಂಬಗಳಿಗೆ ವರ್ಷಕ್ಕೆ 6,000 ರೂ.ಗಳನ್ನು (ಪ್ರತಿ 4 ತಿಂಗಳಿಗೊಮ್ಮೆ 2,000 ರೂ.ಗಳಂತೆ 3 ಕಂತುಗಳಲ್ಲಿ) ನೀಡಲಾಗುತ್ತಿದೆ.
ಈ ಪ್ರೋತ್ಸಾಹಧನವನ್ನು ಮುಂದುವರಿಸಲು ‘ಫ್ರೂಟ್ಸ್’ ತಂತ್ರಾಂಶದ ಗುರುತಿನ ಸಂಖ್ಯೆಯಂತೆ ಕೇಂದ್ರ ಸರ್ಕಾರವು ‘ಅಗ್ರಿ ಸ್ಟಾಕ್’ ಯೋಜನೆಯಡಿ ಗುರುತಿನ ಸಂಖ್ಯೆಯನ್ನು ಸೃಷ್ಟಿಸುವುದು ಕಡ್ಡಾಯವಾಗಿದೆ.
ರೈತರು ತಮ್ಮ ಆಧಾರ್ ಕಾರ್ಡ್ ಹಾಗೂ ಆಧಾರ್‌ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯೊಂದಿಗೆ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ (ಸಿಎಸ್ ಸಿ) ಅಥವಾ ‘ಗ್ರಾಮ ಒನ್’ ಕೇಂದ್ರಗಳಿಗೆ ಭೇಟಿ ನೀಡಿ ಬಯೋಮೆಟ್ರಿಕ್ ಇ-ಕೆವೈಸಿ ಪೂರ್ಣಗೊಳಿಸಬಹುದು.
ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ‘PMKISAN e-KYC through FaceRecognition App’ ಮೂಲಕವೂ ರೈತರು ಸ್ವತಃ ಇ-ಕೆವೈಸಿ ಮಾಡಿಕೊಳ್ಳಬಹುದು.
ಅರ್ಹ ರೈತರೆಲ್ಲರೂ ಶೀಘ್ರವೇ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಯೋಜನೆಯ ಸೌಲಭ್ಯವನ್ನು ಪಡೆಯಬೇಕಾಗಿ ಅವರು ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber of commerce Shivamogga ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಜಾಗತಿಕವಾಗಿ ಗಂಭೀರ ಸಮಸ್ಯೆಯಾಗಿದೆ: ಆರ್.ಮನೋಹರ್

Chamber of commerce Shivamogga ಶಿವಮೊಗ್ಗ ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್...

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...