ವಿದ್ಯಾರ್ಥಿಗಳು ಶಿಸ್ತು, ಶ್ರಮ, ಸಮಯಪ್ರಜ್ಞೆ, ಆತ್ಮವಿಶ್ವಾಸ ಹಾಗೂ ನಿರ್ಭಯತೆ ಬೆಳೆಸಿಕೊಂಡಾಗ ಮಾತ್ರ ಭವಿಷ್ಯದಲ್ಲಿ ಭವ್ಯ ಭಾರತವನ್ನು ಕಟ್ಟಲು ಸಾಧ್ಯ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಸಂದೇಶ್ ಎಚ್.ಪಿ. ಹೇಳಿದರು.
ಅವರು ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್(ರಿ)ಶಿವಮೊಗ್ಗ ಶಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಯುವ ಸ್ಪೂರ್ತಿ ಅಕಾಡೆಮಿ ಚಿಕ್ಕಮಗಳೂರು ವತಿಯಿಂದ ಶಿವಮೊಗ್ಗ ಜಿಲ್ಲೆಯ ಪ್ರೌಢಶಾಲೆಯ ಮುಖ್ಯ ಶಿಕ್ಷಕರುಗಳಿಗೆ ಹಾಗೂ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಶಿವಮೊಗ್ಗದ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಂತೋಷ್ ಎಂ.ಎಸ್., ಯುವ ಸ್ಫೂರ್ತಿ ಅಕಾಡೆಮಿ ಅಧ್ಯಕ್ಷ ಸಿ.ಬಿ. ಸುಂದರೇಶ್, ಗ್ರಾಹಕರ ವ್ಯವಹಾರ ಸಚಿವಾಲಯದ ರಾಜ್ಯ ಉಪಾಧ್ಯಕ್ಷ ಕೆ.ಸಿ. ರವಿಕುಮಾರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಮಂಜುನಾಥ್ ಎಸ್.ಆರ್., ಶ್ರೀ ಆದಿಚುಂಚನಗಿರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಸ್.ವಿ. ಗುರುರಾಜ್, ಗುರುಪುರದ ಬಿಜಿಎಸ್ ಗುರುಕುಲ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುರೇಶ್ ಎಸ್.ಎಚ್. ಹಾಗೂ ಸಕಲೇಶಪುರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಮೇಶ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು ಶಿಸ್ತು ಬೆಳೆಸಿಕೊಂಡಾಗ ಭವ್ಯಭಾರತ ಕಟ್ಟಲು ಸಾಧ್ಯ- ನ್ಯಾ.ಹೆಚ್.ಪಿ.ಸಂದೇಶ್
Date:
