Friday, September 11, 2026
Friday, September 11, 2026

ಕಡಜ ಕಚ್ಚಿ ಮೃತಪಟ್ಟ ಬಾಲಕ: ಹೆಗ್ಗೋಡು ಸನಿಹ ಹತ್ತಿಸರದಲ್ಲಿ ದುರ್ಘಟನೆ

Date:

ಕಡಜದ ಹುಳುಗಳು ದಾಳಿ ಮಾಡಿದ ಪರಿಣಾಮ ಏಳು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಸಾಗರ ತಾಲೂಕಿನ ಹೆಗ್ಗೋಡು ಸಮೀಪದ ಹತ್ತಿಸರ ಗ್ರಾಮದಲ್ಲಿ ನಡೆದಿದೆ.

ಮನೆಯ ಮುಂದೆ ಆಟವಾಡುತ್ತಿದ್ದ ನಿಶ್ವಿತ್ ಮೇಲೆ ಕಡಜದ ಹುಳುಗಳು ದಾಳಿ ಮಾಡಿವೆ. ಮಗನನ್ನು ರಕ್ಷಿಸಲು ಬಂದ ತಂದೆ ವೆಂಕಟೇಶ್ ಅವರಿಗೂ ಹುಳುಗಳು ಕಚ್ಚಿವೆ. ತೀವ್ರವಾಗಿ ಅಸ್ವಸ್ಥಗೊಂಡ ನಿಶ್ವಿತ್‌ನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಮನೆಯ ಮುಂದಿನ ಮರದಲ್ಲಿದ್ದ ಕಡಜದ ಗೂಡಿಗೆ ಗಿಡುಗ ದಾಳಿ ಮಾಡಿದ ಹಿನ್ನೆಲೆಯಲ್ಲಿ ಹುಳುಗಳು ದಾಳಿ ಮಾಡಿವೆ ಎನ್ನಲಾಗಿದೆ. ವೆಂಕಟೇಶ್ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಕುರಿತು ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S. N. Channabasappa ಶಿವಮೊಗ್ಗದ ವಿವಿಧ ಬಡಾವಣೆಗಳಲ್ಲಿ ಶಾಸಕ ” ಚೆನ್ನಿ” ಅವರಿಂದ ಕಾಮಗಾರಿಗಳಿಗೆ ಭೂಮಿ ಪೂಜೆ

S. N. Channabasappa ಶಿವಮೊಗ್ಗ ನಗರದ ಪ್ರತಿಯೊಂದು ವಾರ್ಡ್ ಹಾಗೂ ಬಡಾವಣೆಗಳಲ್ಲಿ...

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...