ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ತ್ಯಾಜವಳ್ಳಿ ಗ್ರಾಮದ ಟಿ.ಆರ್. ಶಿವರಾಜ ಎಂಬುವವರ ಪತ್ನಿ ಮಂಜುಳಾ ಎಂಬ 35 ವರ್ಷದ ಮಹಿಳೆ ಜೂ. 06 ರಂದು ಮನೆಯಿಂದ ಹೊರಗೆ ಹೋದವರು ಈವರೆಗೂ ವಾಪಾಸ್ಸಾಗಿರುವುದಿಲ್ಲ.
ಈಕೆಯು 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ, ದುಂಡು ಮುಖ ಹೊಂದಿದ್ದು, ಮನೆಯಿಂದ ಹೋಗುವಾಗ ನೀಲಿ ಬಣ್ಣದ ಚೂಡಿದಾರ ಧರಿಸಿರುತ್ತಾರೆ.
ಈ ಮಹಿಳೆಯ ಕುರಿತು ಸುಳಿವು ಇದ್ದಲ್ಲಿ ಕುಂಸಿ ಪೊಲೀಸ್ ಠಾಣೆ 9480803351, ಎಸ್‌ಪಿ ಕಚೇರಿ;08182-261402/ 08182-261400 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ತಿಳಿಸಿದೆ.
