ಜಂಟಿ ನಿರ್ದೇಶಕರ ಕಚೇರಿ, ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ, ಶಿವಮೊಗ್ಗ ವತಿಯಿಂದ ಆಯೋಜಿಸಲಾಗಿದ್ದ 80ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮವನ್ನು ಗೌರವಪೂರ್ವಕವಾಗಿ ನೆರವೇರಿಸಲಾಯಿತು.
ಕಾರ್ಯಕ್ರಮದಲ್ಲಿ ಇಲಾಖೆಯ ಉಪ ನಿರ್ದೇಶಕರು ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ. ಎಸ್. ಷಡಾಕ್ಷರಿಯವರು ಧ್ವಜಾರೋಹಣ ನೆರವೇರಿಸಿ, ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದು, ದೇಶಭಕ್ತಿ ಮತ್ತು ರಾಷ್ಟ್ರಾಭಿಮಾನದೊಂದಿಗೆ ಸ್ವಾತಂತ್ರ್ಯೋತ್ಸವವನ್ನು ಆಚರಿಸಿದರು.
