Friday, September 11, 2026
Friday, September 11, 2026

ಎರಡು ವರ್ಷ ಅವಧಿ ಕೃಷಿ ಡಿಪ್ಲೊಮಾ ಅಧ್ಯಯನ ಪ್ರವೇಶಾತಿಗೆ ಅರ್ಜಿ ಆಹ್ವಾನ

Date:

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದ ಅಧೀನದಲ್ಲಿರುವ ಬ್ರಹ್ಮಾವರದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 2 ವರ್ಷಗಳ ಡಿಪ್ಲೊಮಾ ಕೃಷಿ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಡಿಪ್ಲೊಮಾ (ಕೃಷಿ) ಯನ್ನು ಕನ್ನಡ ಮಾಧ್ಯಮದಲ್ಲಿ ಸೆಮಿಸ್ಟರ್ (4 ಸೆಮಿಸ್ಟರ್) ಪದ್ಧತಿಯಲ್ಲಿ ಬೋಧಿಸಲಾಗುವುದು.
ಪ್ರವೇಶ ಅರ್ಹತೆ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದಲ್ಲಿ ಡಿಪ್ಲೊಮಾ (ಕೃಷಿ) ಕೋರ್ಸ್ಗೆ ಪ್ರವೇಶ ಕೋರುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನ್ನಡ ಪಠ್ಯವನ್ನು ಭಾಷೆಯಾಗಿ ಅಭ್ಯಸಿಸಿ ಕನಿಷ್ಟ ಶೇ. 45 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. (ಪ.ಜಾ./ಪ.ಪಂ./ಪ್ರವರ್ಗ-1 ರವರುಗಳಿಗೆ ಕನಿಷ್ಠ ಶೇ. 40 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು). ದಿನಾಂಕ: 20-08-2026 ರಂದು ಅಭ್ಯರ್ಥಿಗಳ ವಯಸ್ಸು 19 ವರ್ಷಗಳನ್ನು ಮೀರಿರಬಾರದು. ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ. 50 ರಷ್ಟು ಸೀಟುಗಳನ್ನು ಡಿಪ್ಲೊಮಾ (ಕೃಷಿ) ಪ್ರವೇಶಾತಿಗೆ ಮೀಸಲಿಡಲಾಗಿದೆ.
ಅಧಿಸೂಚನೆ, ಅರ್ಜಿ ಹಾಗೂ ಮಾಹಿತಿ ಪುಸ್ತಕವನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದ ವೆಬ್‌ಸೈಟ್: www.uahs.edu.in ನಲ್ಲಿ ದಿನಾಂಕ: 15-08-2026 ರಿಂದ 20-08-2026 ರವರೆಗೆ ಡೌನ್ ಲೋಡ್ ಮಾಡಬಹುದು. ಈ ರೀತಿ ವೆಬ್‌ಸೈಟ್ ಮುಖಾಂತರ ಪಡೆದು ಭರ್ತಿಮಾಡಿದ ಅರ್ಜಿಗಳನ್ನು ಮತ್ತು ಅರ್ಜಿಯ ನಿಗದಿತ ಶುಲ್ಕವನ್ನು ಡಿ.ಡಿ. ರೂಪದಲ್ಲಿ ಲಗತ್ತಿಸಿ, ದಿನಾಂಕ: 20-08-2026, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ಇರುವಕ್ಕಿ ಆವರಣದಲ್ಲಿ ನಡೆಯುವ ಮುಕ್ತ ಕೌನ್ಸಿಲಿಂಗ್ ಪ್ರಕ್ರಿಯೆಯ ದಿನ ತರುವುದು.
ಅರ್ಜಿ ಶುಲ್ಕ: ಸಾಮಾನ್ಯ ವರ್ಗದವರಿಗೆ ರೂ. 500/-, ಪ.ಜಾ./ಪ.ಪಂ./ಪ್ರವರ್ಗ-1ರವರಿಗೆ ರೂ. 250/- ಆಗಿದ್ದು, ರಾಷ್ಟ್ರೀಕೃತ ಬ್ಯಾಂಕ್‌ಗಳ ಡಿ.ಡಿ. ಯನ್ನು Comptroller, KSNUAHS, Shivamogga ಹೆಸರಿನಲ್ಲಿ ತೆಗೆದುಕೊಳ್ಳುವುದು.
ಪ್ರವೇಶ ಮತ್ತು ಆಯ್ಕೆ ವಿಧಾನ: ಸರ್ಕಾರದ ಆದೇಶಗಳ ಅನ್ವಯ ಸೀಟುಗಳನ್ನು ಭರ್ತಿ ಮಾಡಲಾಗುವುದು. ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ರೋಸ್ಟರ್ ಪದ್ದತಿಯನ್ನು ಅಳವಡಿಸಿ, ಪ್ರವೇಶಕ್ಕೆ ಆಯ್ಕೆ ಮಾಡಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಪತ್ರ ಹಾಗೂ ವೆಬ್‌ಸೈಟ್ ಮುಖಾಂತರ ತಿಳಿಸಲಾಗುವುದು ಎಂದು ಕೆ.ಶಿ.ನಾ.ಕೃ. ಮ. ತೋ. ವಿ.ವಿವಿಯ ಕುಲಸಚಿವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S. N. Channabasappa ಶಿವಮೊಗ್ಗದ ವಿವಿಧ ಬಡಾವಣೆಗಳಲ್ಲಿ ಶಾಸಕ ” ಚೆನ್ನಿ” ಅವರಿಂದ ಕಾಮಗಾರಿಗಳಿಗೆ ಭೂಮಿ ಪೂಜೆ

S. N. Channabasappa ಶಿವಮೊಗ್ಗ ನಗರದ ಪ್ರತಿಯೊಂದು ವಾರ್ಡ್ ಹಾಗೂ ಬಡಾವಣೆಗಳಲ್ಲಿ...

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...