ಗುಣಮಟ್ಟದ ಆಹಾರ ಹಾಗೂ ಆರೋಗ್ಯಕರ ಜೀವನಕ್ಕಾಗಿ ಸರ್ಕಾರ ಹೋಟೆಲ್ ಹಾಗೂ ರೆಸ್ಟೋರೆಂಟ್‌ಗಳಿಗೆ ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಹೊರಡಿಸಿದೆ.
ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಸ್ವಚ್ಛತೆ, ಗುಣಮಟ್ಟದ ಆಹಾರ, ಸುರಕ್ಷಿತ ನೀರು ಹಾಗೂ ಆರೋಗ್ಯಕರ ಅಡುಗೆ ಪದ್ಧತಿಯನ್ನು ಕಡ್ಡಾಯವಾಗಿ ಪಾಲಿಸಬೇಕು. ಸಸ್ಯಾಹಾರ ಮತ್ತು ಮಾಂಸಾಹಾರವನ್ನು ಪ್ರತ್ಯೇಕವಾಗಿ ಸಂಗ್ರಹಿಸಬೇಕು, ಸಿಬ್ಬಂದಿ ಸ್ವಚ್ಛ ಸಮವಸ್ತ್ರ ಧರಿಸಬೇಕು ಹಾಗೂ ಆಹಾರ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡಬೇಕು ಎಂದು ರಾಜ್ಯದ ಆರೋಗ್ಯ ಇಲಾಖೆ ಆದೇಶಿಸಿದೆ.
