ಆಗಸ್ಟ್ 15ರಂದು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಧಾಮದ ಮರಿಯಮಂಗಲ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟ ಘಟನೆ ರಾಜ್ಯದಾದ್ಯಂತ ಗಂಭೀರ ಚರ್ಚೆಗೆ ಕಾರಣವಾಗಿದೆ.
ಈ ವಿಚಾರವನ್ನು ವಿಧಾನಪರಿಷತ್‌ನಲ್ಲಿ ಪ್ರಸ್ತಾಪಿಸಿದ ಮಾನ್ಯ ವಿಧಾನಪರಿಷತ್ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಡಿ.ಎಸ್.ಅರುಣ್ ಅವರು, ಗುಂಡು ಹಾರಿಸುವ ಆದೇಶವನ್ನು ನೀಡಿದವರು ಯಾರು? ಯಾರ ಸೂಚನೆಯ ಮೇರೆಗೆ ಈ ಕ್ರಮ ಕೈಗೊಳ್ಳಲಾಯಿತು? ಎಂದು ಸರ್ಕಾರದ ಮುಂದೆ ನೇರವಾಗಿ ಪ್ರಶ್ನೆಸಿದರು.
ಅರಣ್ಯ ಇಲಾಖೆ ಸಿಬ್ಬಂದಿಯ ಕಾರ್ಯಾಚರಣೆಗಳಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಖಚಿತಪಡಿಸಲು, ಕರ್ತವ್ಯದಲ್ಲಿರುವ ಪ್ರತಿಯೊಬ್ಬ ಸಿಬ್ಬಂದಿಗೂ Body Camera ಕಡ್ಡಾಯಗೊಳಿಸಬೇಕು ಎಂಬ ಸಲಹೆಯನ್ನೂ ಡಿ.ಎಸ್.ಅರುಣ್ ಅವರು ಸರ್ಕಾರಕ್ಕೆ ನೀಡಿದರು.
