ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ 2026-27ನೇ ಸಾಲಿನ ಮುಂಗಾರು ಹಂಗಾಮಿಗೆ ನೀರು ಹರಿಸುವ ಕುರಿತು ಬೆಂಗಳೂರಿನ ವಿಕಾಸಸೌಧದ ಕೊಠಡಿ ಸಂಖ್ಯೆ 318 ರಲ್ಲಿ ಜರುಗಿದ ‘ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ 89ನೇ ಸಭೆ’ಯ ಅಧ್ಯಕ್ಷತೆಯನ್ನು ಜಿಲ್ಲಾ ಉಸ್ತುವಾರಿ ಹಾಗೂ ಶಾಲಾಶಿಕ್ಷಣ ಸಚಿವ ಮಧು ಬಂಗಾರಪ್ಪ ವಹಿಸಿದ್ದರು.
ಸಭೆಯಲ್ಲಿ ಸುದೀರ್ಘ ಸಮಾಲೋಚನೆ ನಡೆಸಲಾಯಿತು.
ಸಭೆಯಲ್ಲಿ ಪ್ರಸ್ತುತ ಜಲಾಶಯದಲ್ಲಿರುವ ನೀರಿನ ಸಂಗ್ರಹ ಹಾಗೂ ಸ್ಥಿತಿಗತಿಗಳನ್ನು ಕೂಲಂಕಷವಾಗಿ ಮಾಹಿತಿ ಪರಿಶೀಲಿಸಲಾಯಿತು. ಮುಂಗಾರು ಹಂಗಾಮಿಗೆ ರೈತರ ಬೆಳೆಗೆ ಅನುಕೂಲವಾಗುವಂತೆ ನೀರು ಹರಿಸುವ ಕುರಿತು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರೊಂದಿಗೆ ಶೀಘ್ರವೇ ಚರ್ಚಿಸಿ, ರೈತರ ಹಿತದೃಷ್ಟಿಯಿಂದ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು.
ನಮ್ಮ ರೈತಾಪಿ ಬಾಂಧವರ ಶ್ರೇಯೋಭಿವೃದ್ಧಿ ಮತ್ತು ಕೃಷಿ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವುದು ನಮ್ಮ ಆದ್ಯತೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
