Friday, September 11, 2026
Friday, September 11, 2026

ಶಿವಮೊಗ್ಗ ಆಟೋ ಕಾಂಪ್ಲೆಕ್ಸ್ ನಲ್ಲಿ ಬೀದಿ ನಾಯಿ ಹಾವಳಿ: ನಿಯಂತ್ರಣಕ್ಕೆ ಸಾರ್ವಜನಿಕರ ಮೊರೆ

Date:

ಶಿವಮೊಗ್ಗ ನಗರದ ಆಟೊ ಕಾಂಪ್ಲೆಕ್ಸ್‌ನಲ್ಲಿ ಬೀದಿ ನಾಯಿಯೊಂದು ಏಕಾಏಕಿ ದಾಳಿ ನಡೆಸಿ, ಹತ್ತಕ್ಕೂ ಹೆಚ್ಚು ಮಂದಿಗೆ ಕಚ್ಚಿರುವ ಘಟನೆ ನಡೆದಿದೆ.

ಸೋಮವಾರ ಆಟೊ ಕಾಂಪ್ಲೆಕ್ಸ್‌ನ ಎರಡನೇ ಅಡ್ಡರಸ್ತೆಯಲ್ಲಿ ಘಟನೆ ನಡೆದಿದ್ದು, ಗಾಯಾಳುಗಳು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ.

ಮಳಿಗೆಯವರು, ಕೆಲಸಗಾರರು ಹಾಗೂ ವಿವಿಧ ಕೆಲಸಗಳಿಗಾಗಿ ಬಂದಿದ್ದ ಸಾರ್ವಜನಿಕರ ಮೇಲೆ ನಾಯಿ ದಾಳಿ ನಡೆಸಿದೆ. ವ್ಯಕ್ತಿಯೊಬ್ಬರ ಹಿಂದಿನಿಂದ ಬಂದು ನಾಯಿ ದಿಢೀರ್ ದಾಳಿ ನಡೆಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ವಿಡಿಯೋ ವೈರಲ್ ಆಗಿದೆ.

ಆಟೊ ಕಾಂಪ್ಲೆಕ್ಸ್‌ನ ನಾಲ್ಕು ರಸ್ತೆಗಳಲ್ಲೂ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಸಂಜೆ ಬಳಿಕ ಸಾರ್ವಜನಿಕರು ಹಾಗೂ ವ್ಯಾಪಾರಿಗಳು ಆತಂಕದಿಂದ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...