Friday, September 11, 2026
Friday, September 11, 2026

B.Y. Vijayendra ಬಿ.ವೈ.ವಿಜಯೇಂದ್ರ ವಿರುದ್ಧವೇ ಕುಮಾರ್ ಬಂಗಾರಪ್ಪ ಟೀಕಾಸ್ತ್ರ : ಸ್ವಪಕ್ಷದವರೇ ಗರಂ

Date:

B.Y. Vijayendra ಸೊರಬದಲ್ಲಿ ನಡೆದ ಬಿಜೆಪಿ ಪಕ್ಷದ ಸಭೆಯಲ್ಲಿ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಗರಂ ಆಗಿದ್ದಾರೆ. ಸ್ವಪಕ್ಷ ಹಾಗೂ ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿರುವ ಅವರು, ರಾಜ್ಯ ರಾಜಕಾರಣದಲ್ಲಿ ಬಿಜೆಪಿ ಅಡ್ಜಸ್ಟ್ಮೆಂಟ್ ರಾಜಕೀಯಕ್ಕೆ ಮುಂದಾಗಿದೆ ಎಂದು ಆರೋಪಿಸಿದ್ದಾರೆ.

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಅಡ್ಜಸ್ಟ್ಮೆಂಟ್ ರಾಜಕಾರಣ ಮಾಡುತ್ತಿದ್ದಾರೆ ಎಂದು ಕುಮಾರ್ ಬಂಗಾರಪ್ಪ ನೇರ ಆರೋಪ ಮಾಡಿದ್ದಾರೆ. ಶಿಕಾರಿಪುರದಲ್ಲಿ ಡಮ್ಮಿ ಅಭ್ಯರ್ಥಿ ಇದ್ದ ಕಾರಣ ವಿಜಯೇಂದ್ರ ಗೆಲುವು ಸಾಧಿಸಿದರು ಎಂದು ಹೇಳಿರುವ ಅವರು, ಲೋಕಸಭಾ ಚುನಾವಣೆಯಲ್ಲೂ ರಾಘವೇಂದ್ರ ಅವರು ಡಮ್ಮಿ ಅಭ್ಯರ್ಥಿಯ ವಿರುದ್ಧ ಗೆಲುವು ಸಾಧಿಸಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಬಿಜೆಪಿಯಲ್ಲಿ ಅಡ್ಜಸ್ಟ್ಮೆಂಟ್ ರಾಜಕೀಯ ನಡೆಯುತ್ತಿರುವ ಬಗ್ಗೆ ಇದೀಗ ಪಕ್ಷದ ಹಿರಿಯ ನಾಯಕರೇ ಮಾತನಾಡುವ ಪರಿಸ್ಥಿತಿ ಬಂದಿದೆ ಎಂದು ಕುಮಾರ್ ಬಂಗಾರಪ್ಪ ಹೇಳಿದ್ದಾರೆ.

B.Y. Vijayendra ಸೊರಬದಲ್ಲಿ ಬಿಜೆಪಿ ಹಿನ್ನಡೆಗೆ ವಿಜಯೇಂದ್ರ ಮತ್ತು ರಾಘವೇಂದ್ರ ಅವರೇ ನೇರ ಕಾರಣ ಎಂದು ಆರೋಪಿಸಿರುವ ಅವರು, ತಾವು ಬಿಜೆಪಿಯನ್ನು ತೊರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸಾಮಾನ್ಯ ಕಾರ್ಯಕರ್ತನಾಗಿ ಬಿಜೆಪಿಯಲ್ಲೇ ಮುಂದುವರಿಯುವುದಾಗಿ ತಿಳಿಸಿದ್ದಾರೆ.

ಇದೇ ವೇಳೆ, ಮುಳುಗುತ್ತಿರುವ ಹಡಗಿನಂತಿರುವ ಕಾಂಗ್ರೆಸ್ ಪಕ್ಷಕ್ಕೆ ತಾವು ಸೇರುವ ಪ್ರಶ್ನೆಯೇ ಇಲ್ಲ ಎಂದು ಕುಮಾರ್ ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...