Friday, September 11, 2026
Friday, September 11, 2026

B.Y. Raghavendra ಭ್ರಷ್ಠಾಚಾರ ಆರೋಪಿ ಸಚಿವ‌ ನಾಗೇಂದ್ರ ಅವರನ್ನ ವಜಾ ಮಾಡಿ – ಸಂಸದ ಬಿ.ವೈ.ರಾಘವೇಂದ್ರ

Date:

B.Y. Raghavendra ವಾಲ್ಮೀಕಿ ಅಭಿವೃದ್ಧಿ ನಿಗಮದ ₹187 ಕೋಟಿ ಬೃಹತ್‌ ಹಣ ದುರುಪಯೋಗ ಹಾಗೂ ಭ್ರಷ್ಟಾಚಾರದ ಗಂಭೀರ ಆರೋಪ ಎದುರಿಸುತ್ತಿರುವ ನಾಗೇಂದ್ರ ಅವರನ್ನು ತಕ್ಷಣವೇ ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ, ಭಾರತೀಯ ಜನತಾ ಪಾರ್ಟಿ – ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಹಮ್ಮಿಕೊಳ್ಳಲಾದ ಅನಿರ್ದಿಷ್ಟಾವಧಿ ನಿರಂತರ ಧರಣಿ ಸತ್ಯಾಗ್ರಹದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಭಾಗವಹಿಸಿದ್ದರು.

​ಸಾಮಾಜಿಕ ನ್ಯಾಯಕ್ಕೆ ಮಾರಕವಾಗಿರುವ ಮತ್ತು ಸಾರ್ವಜನಿಕರ ಹಣವನ್ನು ಕೊಳ್ಳೆ ಹೊಡೆದಿರುವ ಭ್ರಷ್ಟರಿಗೆ ರಾಜಕೀಯ ರಕ್ಷಣೆ ನೀಡುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ರಾಘವೇಂದ್ರ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆಯನ್ನ ಟೀಕಿಸಿದರು .
ವಾಲ್ಮೀಕಿ ನಿಗಮದ ಅಕ್ರಮದ ಬಗ್ಗೆ ಪಾರದರ್ಶಕ ತನಿಖೆಯಾಗಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವವರೆಗೆ ಮತ್ತು ಭ್ರಷ್ಟ ಸಚಿವರ ವಜಾ ಆಗುವವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಬಿ.ವೈ.ರಾಘವೇಂದ್ರ ಘೋಷಿಸಿದರು.

​ಈ ಧರಣಿ ಸತ್ಯಾಗ್ರಹದಲ್ಲಿ ಪಕ್ಷದ ಪ್ರಮುಖರು, ಜನಪ್ರತಿನಿಧಿಗಳು ಹಾಗೂ ನೂರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S. N. Channabasappa ಶಿವಮೊಗ್ಗದ ವಿವಿಧ ಬಡಾವಣೆಗಳಲ್ಲಿ ಶಾಸಕ ” ಚೆನ್ನಿ” ಅವರಿಂದ ಕಾಮಗಾರಿಗಳಿಗೆ ಭೂಮಿ ಪೂಜೆ

S. N. Channabasappa ಶಿವಮೊಗ್ಗ ನಗರದ ಪ್ರತಿಯೊಂದು ವಾರ್ಡ್ ಹಾಗೂ ಬಡಾವಣೆಗಳಲ್ಲಿ...

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...