Friday, September 11, 2026
Friday, September 11, 2026

ಗೋಮಾಂಸ ಮಾರಾಟ.ಗೋಹತ್ಯೆ ವಿರೋಧಿಸಿ ಶಿಕಾರಿಪುರ ಬಂದ್!

Date:

ಶಿಕಾರಿಪುರದಲ್ಲಿ ಅಕ್ರಮ ಗೋಮಾಂಸ ಮಾರಾಟ ಹಾಗೂ ಗೋಹತ್ಯೆ ಆರೋಪದ ಹಿನ್ನೆಲೆಯಲ್ಲಿ ಹಿಂದೂಪರ ಸಂಘಟನೆಗಳು ಕರೆ ನೀಡಿದ್ದ ಬಂದ್‌ಗೆ ಪಟ್ಟಣದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬಂದ್ ಹಿನ್ನೆಲೆಯಲ್ಲಿ ಶಿಕಾರಿಪುರ ಪಟ್ಟಣದ ಬಹುತೇಕ ಅಂಗಡಿ-ಮುಂಗಟ್ಟುಗಳು ಬಾಗಿಲು ತೆರೆಯದೆ ಬಂದ್ ಆಚರಿಸಿದವು. ಪಟ್ಟಣದ ಪ್ರಮುಖ ವಾಣಿಜ್ಯ ಪ್ರದೇಶಗಳು ಸಹಜವಾಗಿಯೇ ಬಿಕೋ ಎನ್ನುತ್ತಿದ್ದವು.

ಆದರೆ ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸಿದವು.

ಅಕ್ರಮ ಗೋ ಸಾಗಾಟ ಹಾಗೂ ಗೋಮಾಂಸ ಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದು ಹಿಂದೂಪರ ಸಂಘಟನೆಗಳ ಪ್ರಮುಖರು ಆಗ್ರಹಿಸಿದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಸಂಘಟನೆಗಳ ಮುಖಂಡರು, ಬಂದ್‌ಗೆ ಬೆಂಬಲ ನೀಡುವಂತೆ ವ್ಯಾಪಾರಸ್ಥರಲ್ಲಿ ಮನವಿ ಮಾಡಿದರು.

ಬಂದ್ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪಟ್ಟಣದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...