Friday, September 11, 2026
Friday, September 11, 2026

ಕಸ್ತೂರಿ ರಂಗನ್ ವರದಿ ಜಾರಿ? : ಮಲೆನಾಡಿನ ಗ್ರಾಮಸ್ಥರಿಗೆ ಹಲವು ಆತಂಕಗಳಿಗೆ ಕಾರಣ, ರೈತರ ಪ್ರತಿಭಟನೆ

Date:

ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ಮಲೆನಾಡಿನಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ರೈತರು ಪ್ರತಿಭಟನೆ ನಡೆಸಿದರು.

ಸಿಗಂದೂರು ಸೇತುವೆಯಿಂದ ಹುಲಿದೇವರಬನದವರೆಗೆ ಬೈಕ್ ರ್ಯಾಲಿ ನಡೆಸಿದ ರೈತರು, ಬಳಿಕ ಕೋಳೂರು ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಜನವಸತಿ ಇರುವ ಗ್ರಾಮಗಳನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ವರದಿಯಲ್ಲಿ ಉಲ್ಲೇಖಿಸಿರುವುದಕ್ಕೆ ರೈತರು ವಿರೋಧ ವ್ಯಕ್ತಪಡಿಸಿದರು. ಕಸ್ತೂರಿ ರಂಗನ್ ವರದಿ ಜಾರಿಯಾದರೆ ಮಲೆನಾಡಿನ ಗ್ರಾಮೀಣ ಭಾಗದ ಜನರಿಗೆ ಹಲವು ರೀತಿಯ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ ಎಂದು ಪ್ರತಿಭಟನಾಕಾರರು ಆತಂಕ ವ್ಯಕ್ತಪಡಿಸಿದರು.

ವರದಿ ಅನುಷ್ಠಾನಕ್ಕೆ ವಿರೋಧ ವ್ಯಕ್ತಪಡಿಸಿದ ರೈತರು, ಕೋಳೂರು ಗ್ರಾಮ ಪಂಚಾಯಿತಿ ಕಾರ್ಯದರ್ಶಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ರೈತ ನಾಯಕ ಅಶೋಕ ಜಂಬಳ್ಳಿ, ಸಾಮಾಜಿಕ ಕಾರ್ಯಕರ್ತ ಅ.ನಾ. ಚಂದ್ರಶೇಖರ್, ರೈತ ಮಂಜಪ್ಪ ಆರನಬೈಲು ಸೇರಿದಂತೆ ಹಲವು ಮುಖಂಡರು ಹಾಗೂ ರೈತರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S. N. Channabasappa ಶಿವಮೊಗ್ಗದ ವಿವಿಧ ಬಡಾವಣೆಗಳಲ್ಲಿ ಶಾಸಕ ” ಚೆನ್ನಿ” ಅವರಿಂದ ಕಾಮಗಾರಿಗಳಿಗೆ ಭೂಮಿ ಪೂಜೆ

S. N. Channabasappa ಶಿವಮೊಗ್ಗ ನಗರದ ಪ್ರತಿಯೊಂದು ವಾರ್ಡ್ ಹಾಗೂ ಬಡಾವಣೆಗಳಲ್ಲಿ...

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...