Friday, September 11, 2026
Friday, September 11, 2026

ಜಿಲ್ಲೆಯಲ್ಲಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ: ಆಸಕ್ತ ಕ್ರೀಡಾಸ್ಪರ್ಧಿಗಳಿಂದ ಅರ್ಜಿ ಆಹ್ವಾನ

Date:

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಶಿವಮೊಗ್ಗ ಇವರುಗಳಗಳ ಜಂಟಿ ಆಶ್ರಯದಲ್ಲಿ 2026-27ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಆಯ್ಕೆ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಶಿವಮೊಗ್ಗ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ನಡೆಯಲಿರುವ ಈ ಸ್ಪರ್ಧೆಗಳಲ್ಲಿ ಭಾಗವಹಿಸಲು ಆಸಕ್ತ ಕ್ರೀಡಾಪಟುಗಳಿಂದ ಅರ್ಜಿ ಮತ್ತು ನೋಂದಣಿಗೆ ಆಹ್ವಾನಿಸಲಾಗಿದೆ.
ತಾಲೂಕುವಾರು ಕ್ರೀಡಾಕೂಟಗಳು ಆಯಾ ತಾಲೂಕಿನ ನಿಗದಿತ ಮೈದಾನಗಳಲ್ಲಿ ನಡೆಯಲಿದ್ದು ವೇಳಾಪಟ್ಟಿ ಹೀಗಿದೆ: ಆಗಸ್ಟ್ 30 ರಂದು ಸಾಗರದ ನೆಹರೂ ಮೈದಾನ ಹಾಗೂ ಸೊರಬದ ತಾಲೂಕು ಕ್ರೀಡಾಂಗಣ, ಸೆಪ್ಟೆಂಬರ್ 1 ರಂದು ಶಿವಮೊಗ್ಗದ ನೆಹರೂ ಕ್ರೀಡಾಂಗಣ, ಸೆಪ್ಟೆಂಬರ್ 3 ರಂದು ಶಿಕಾರಿಪುರದ ತಾಲೂಕು ಕ್ರೀಡಾಂಗಣ, ಸೆಪ್ಟೆಂಬರ್ 4 ರಂದು ತೀರ್ಥಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನ ಹಾಗೂ ಹೊಸನಗರದ ತಾಲೂಕು ಕ್ರೀಡಾಂಗಣ ಮತ್ತು ಸೆಪ್ಟೆಂಬರ್ 6 ರಂದು ಭದ್ರಾವತಿಯ ವಿ.ವಿ.ಎಸ್.ಎಲ್ ಕ್ರೀಡಾಂಗಣದಲ್ಲಿ ಸ್ಪರ್ಧೆಗಳು ಜರುಗಲಿವೆ.
ಈ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಫುಟ್‌ಬಾಲ್, ಖೋ-ಖೋ, ಕಬಡ್ಡಿ, ಥ್ರೋಬಾಲ್ ಮತ್ತು ಯೋಗಾಸನ ಸ್ಪರ್ಧೆಗಳನ್ನು ಮಾತ್ರ ಆಯೋಜಿಸಲಾಗುತ್ತದೆ. ವೈಯಕ್ತಿಕ ಕ್ರೀಡೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದವರು ಮತ್ತು ಗುಂಪು ಕ್ರೀಡೆಯಲ್ಲಿ ಪ್ರಥಮ ಸ್ಥಾನ ಪಡೆದ/ಆಯ್ಕೆಯಾದ ತಂಡಗಳು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆಯಲಿದ್ದಾರೆ. ಪ್ರತಿಯೊಬ್ಬ ಕ್ರೀಡಾಪಟುವಿಗೆ ಗರಿಷ್ಠ ಎರಡು ವೈಯಕ್ತಿಕ ಹಾಗೂ ಒಂದು ಗುಂಪು ಸ್ಪರ್ಧೆಯಲ್ಲಿ ಮಾತ್ರ ಭಾಗವಹಿಸಲು ಅವಕಾಶವಿರುತ್ತದೆ.
ನಿಯಮಗಳು ಮತ್ತು ಸೂಚನೆಗಳು:
ಆಯಾ ತಾಲೂಕಿನ ಕ್ರೀಡಾಪಟುಗಳು ತಮ್ಮ ತಾಲೂಕಿನಲ್ಲಿ ಮಾತ್ರ ಭಾಗವಹಿಸಲು ಅರ್ಹರಾಗಿರುತ್ತಾರೆ. ಭಾಗವಹಿಸುವ ಸಮಯದಲ್ಲಿ ಮೂಲ ಆಧಾರ್ ಕಾರ್ಡ್ ಹಾಜರುಪಡಿಸುವುದು ಕಡ್ಡಾಯವಾಗಿದೆ. ಬೇರೆ ತಾಲೂಕಿನ ಆಟಗಾರರು ಭಾಗವಹಿಸಬೇಕಾದಲ್ಲಿ, ಅವರು ಆ ತಾಲೂಕಿನಲ್ಲಿ ಶಿಕ್ಷಣ ಪಡೆಯುತ್ತಿರಬೇಕು. ನಿಯಮ ಮೀರಿ ಬೇರೆ ತಾಲೂಕಿನ ಆಟಗಾರರನ್ನು ಆಡಿಸಿದಲ್ಲಿ ಅಂತಹ ತಂಡ ಅಥವಾ ಆಟಗಾರರನ್ನು ಅನರ್ಹಗೊಳಿಸಿ ಪಂದ್ಯಾವಳಿಯಿಂದ ತೆಗೆದುಹಾಕಲಾಗುತ್ತದೆ.
ಕ್ರೀಡಾಪಟುಗಳು ನಿಗದಿತ ದಿನಾಂಕದಂದು ಬೆಳಿಗ್ಗೆ 9:30 ರ ಒಳಗಾಗಿ ಕ್ರೀಡಾಂಗಣಕ್ಕೆ ಆಗಮಿಸಿ, ನೋಂದಣಿ ಮಾಡಿಕೊಳ್ಳಬೇಕು. 9:30 ರೊಳಗೆ ನೋಂದಾಯಿಸಿಕೊಂಡವರಿಗೆ ಮಾತ್ರ ಭಾಗವಹಿಸುವ ಅವಕಾಶ ಹಾಗೂ ಉಪಹಾರದ ವ್ಯವಸ್ಥೆ ಇರಲಿದೆ. ಪಂದ್ಯಾವಳಿಯನ್ನು ಏರ್ಪಡಿಸಲು ಕನಿಷ್ಠ 4 ತಂಡಗಳು ಇರಬೇಕಾಗಿದ್ದು, ಇಲ್ಲದಿದ್ದಲ್ಲಿ ಆಯ್ಕೆ ನಡೆಸಿ ಮುಂದಿನ ಹಂತಕ್ಕೆ ಕಳುಹಿಸಲಾಗುವುದು. ಕ್ರೀಡಾಕೂಟದ ಸ್ಪರ್ಧೆಗಳನ್ನು ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ನಡೆಸಲಾಗುತ್ತದೆ. ಪಂದ್ಯಾವಳಿಯಲ್ಲಿ ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ. ಸಮಯಕ್ಕೆ ಸರಿಯಾಗಿ ಹಾಜರಾಗದ ತಂಡಗಳನ್ನು ನಿರ್ದಾಕ್ಷಿಣ್ಯವಾಗಿ ಅನರ್ಹಗೊಳಿಸಲಾಗುವುದು.
ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಮೊಬೈಲ್ ಆಪ್ ಅಥವಾ ವೆಬ್‌ಸೈಟ್ ಮೂಲಕ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ದೈಹಿಕ ಶಿಕ್ಷಣಾಧಿಕಾರಿಗಳು ಅಥವಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S. N. Channabasappa ಶಿವಮೊಗ್ಗದ ವಿವಿಧ ಬಡಾವಣೆಗಳಲ್ಲಿ ಶಾಸಕ ” ಚೆನ್ನಿ” ಅವರಿಂದ ಕಾಮಗಾರಿಗಳಿಗೆ ಭೂಮಿ ಪೂಜೆ

S. N. Channabasappa ಶಿವಮೊಗ್ಗ ನಗರದ ಪ್ರತಿಯೊಂದು ವಾರ್ಡ್ ಹಾಗೂ ಬಡಾವಣೆಗಳಲ್ಲಿ...

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...