ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2026-27ನೇ ಸಾಲಿನ ಸಾಮಾನ್ಯ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳಿಗೆ ನೀಡುವ ಧನಸಹಾಯ ಮತ್ತು ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸುವ ಕಾಲಾವಧಿಯನ್ನು ಮತ್ತೆ 15 ದಿನಗಳ ಕಾಲ ವಿಸ್ತರಿಸಿದೆ.
ರಾಜ್ಯ ಹಾಗೂ ಹೊರರಾಜ್ಯಗಳಲ್ಲಿ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ ಮತ್ತು ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸಲು ಶ್ರಮಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಧನಸಹಾಯ, ಕಲಾವಿದರಿಗೆ ವಾದ್ಯ ಪರಿಕರ ಹಾಗೂ ವೇಷಭೂಷಣಗಳ ಖರೀದಿಗೆ ಸಹಾಯಧನ ಮತ್ತು ಚಿತ್ರಕಲೆ ಅಥವಾ ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡಲು ಈ ಹಿಂದೆ ಜುಲೈ 22 ರಿಂದ ಆಗಸ್ಟ್ 20ರವರೆಗೆ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು.
ಇದೀಗ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದ್ದು, ಅರ್ಹ ಆಸಕ್ತರು ಆಗಸ್ಟ್ 21 ರಿಂದ ಸೆಪ್ಟೆಂಬರ್ 4ರ ಸಂಜೆ 5:30ರ ಒಳಗಾಗಿ ಸೇವಾಸಿಂಧು ವೆಬ್‌ಸೈಟ್ (Sevasindhu.karnataka.gov.in) ಮುಖಾಂತರ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ನಿಗದಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸುವುದಿಲ್ಲ ಹಾಗೂ ಇಲಾಖೆಯಲ್ಲಿ ನೇರವಾಗಿ ಯಾವುದೇ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾಮಾನ್ಯ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳಿಗೆ ನೀಡುವ ಧನಸಹಾಯ ಮತ್ತು ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸುವ ಕಾಲಾವಧಿಯನ್ನು ಮತ್ತೆ 15 ದಿನಗಳ ಕಾಲ ವಿಸ್ತರಿಸಿದೆ.
ರಾಜ್ಯ ಹಾಗೂ ಹೊರರಾಜ್ಯಗಳಲ್ಲಿ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ ಮತ್ತು ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸಲು ಶ್ರಮಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಧನಸಹಾಯ, ಕಲಾವಿದರಿಗೆ ವಾದ್ಯ ಪರಿಕರ ಹಾಗೂ ವೇಷಭೂಷಣಗಳ ಖರೀದಿಗೆ ಸಹಾಯಧನ ಮತ್ತು ಚಿತ್ರಕಲೆ ಅಥವಾ ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡಲು ಈ ಹಿಂದೆ ಜುಲೈ 22 ರಿಂದ ಆಗಸ್ಟ್ 20ರವರೆಗೆ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು.
ಇದೀಗ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದ್ದು, ಅರ್ಹ ಆಸಕ್ತರು ಆಗಸ್ಟ್ 21 ರಿಂದ ಸೆಪ್ಟೆಂಬರ್ 4ರ ಸಂಜೆ 5:30ರ ಒಳಗಾಗಿ ಸೇವಾಸಿಂಧು ವೆಬ್‌ಸೈಟ್ (Sevasindhu.karnataka.gov.in) ಮುಖಾಂತರ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ನಿಗದಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸುವುದಿಲ್ಲ ಹಾಗೂ ಇಲಾಖೆಯಲ್ಲಿ ನೇರವಾಗಿ ಯಾವುದೇ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.