Friday, September 11, 2026
Friday, September 11, 2026

ಸೆಪ್ಟೆಂಬರ್ 5 & 6 ನವಿಲೆಯ ಕೃಷಿ ಕಾಲೇಜಿನ ಆವರಣದಲ್ಲಿ”ಸಸ್ಯ ಸಂತೆ – 2026″

Date:

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ‘ಸಸ್ಯ ಸಂತೆ–2026’ ಆಯೋಜಿಸಲಾಗಿದೆ.

ತೋಟಗಾರಿಕಾ ಬೆಳೆಗಳ ಬೀಜ ಮತ್ತು ಸಸಿಗಳು, ವಿವಿಧ ಸಲಕರಣೆಗಳು ಹಾಗೂ ಪರಿಕರಗಳೊಂದಿಗೆ ಒಂದೇ ಸೂರಿನಡಿ ಸಸ್ಯಗಳ ಪ್ರದರ್ಶನ, ಮಾರಾಟ ಮತ್ತು ತಾಂತ್ರಿಕ ಮಾಹಿತಿ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಸೆಪ್ಟೆಂಬರ್ 5 ಮತ್ತು 6ರಂದು ಎರಡು ದಿನಗಳ ಕಾಲ ನಡೆಯಲಿರುವ ಸಸ್ಯ ಸಂತೆಯು ಬೆಳಗ್ಗೆ 9 ಗಂಟೆಯಿಂದ ಸಂಜೆ 8 ಗಂಟೆಯವರೆಗೆ ಕೃಷಿ ವಿಜ್ಞಾನ ಕೇಂದ್ರ, ನವಿಲೆ ಆವರಣ, ಶಿವಮೊಗ್ಗದಲ್ಲಿ ನಡೆಯಲಿದೆ.

ಸಸ್ಯ ಸಂತೆಯಲ್ಲಿ ಹಣ್ಣಿನ ಬೆಳೆಗಳ ಸಸಿಗಳು, ಸಸಿ ಮತ್ತು ಕಸಿ ಗಿಡಗಳು, ಹೂ ಹಾಗೂ ಅಲಂಕಾರಿಕ ಸಸ್ಯಗಳು, ಔಷಧೀಯ ಮತ್ತು ಸುಗಂಧ ಸಸ್ಯಗಳು, ತರಕಾರಿ ಬೀಜದ ಕಿಟ್, ಹೂ ಬೀಜದ ಕಿಟ್ ಹಾಗೂ ಮೈಕ್ರೋಗ್ರೀನ್ಸ್ ಬೀಜದ ಕಿಟ್‌ಗಳು ಲಭ್ಯವಿರಲಿವೆ.

ಇದರೊಂದಿಗೆ ತೋಟಗಾರಿಕಾ ಉಪಕರಣಗಳು, ಹೂಕುಂಡ ಮಿಶ್ರಣ, ಜೈವಿಕ ಉತ್ಕೃಷ್ಟಗಳು ಹಾಗೂ ಸಾವಯವ ಗೊಬ್ಬರ, ಮಾಲ್ಯವರ್ಧಿತ ಹಾಗೂ ಸಂಸ್ಕರಿತ ಉತ್ಪನ್ನಗಳು ಮತ್ತು ಆಹಾರ ಮಳಿಗೆಗಳಿಗೂ ಅವಕಾಶ ಕಲ್ಪಿಸಲಾಗಿದೆ.

ರೈತರು, ತೋಟಗಾರಿಕೆ ಆಸಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಸ್ಯ ಸಂತೆಯ ಪ್ರಯೋಜನ ಪಡೆದುಕೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ 9449069274, 9482024908, 9739916660, 9480751606, 9900091832 ಹಾಗೂ 9353493824 ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S. N. Channabasappa ಶಿವಮೊಗ್ಗದ ವಿವಿಧ ಬಡಾವಣೆಗಳಲ್ಲಿ ಶಾಸಕ ” ಚೆನ್ನಿ” ಅವರಿಂದ ಕಾಮಗಾರಿಗಳಿಗೆ ಭೂಮಿ ಪೂಜೆ

S. N. Channabasappa ಶಿವಮೊಗ್ಗ ನಗರದ ಪ್ರತಿಯೊಂದು ವಾರ್ಡ್ ಹಾಗೂ ಬಡಾವಣೆಗಳಲ್ಲಿ...

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...