Shivamogga News ಹರಕೆರೆ ರಿಂಗ್ರೋಡ್ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ ಹಾಗೂ ಮೊಬೈಲ್ ದೋಚುತ್ತಿದ್ದ ಮೂವರು ಖದೀಮರನ್ನು ತುಂಗಾನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಅಮಾನ್, ಮೊಹಮ್ಮದ್ ಶೆಹಜಾನ್ ಹಾಗೂ ಹೇಮಂತ್ ಎಂದು ಗುರುತಿಸಲಾಗಿದೆ.
ಆರೋಪಿಗಳು ಸಾರ್ವಜನಿಕರಿಗೆ ಬೆದರಿಕೆ ಹಾಕಿ, ಹಲ್ಲೆ ನಡೆಸಿ ಹಣ ಹಾಗೂ ಮೊಬೈಲ್ಗಳನ್ನು ದೋಚಿದ್ದರು. ಈ ಕುರಿತು ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Shivamogga News ಬಂಧಿತರಿಂದ ₹30,500 ನಗದು, ಎರಡು ಮೊಬೈಲ್ಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಇನ್ನೋವಾ ಕಾರನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ತುಂಗಾನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಗುರುರಾಜ್ ಕೆ.ಟಿ. ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ.
