Monday, August 24, 2026
Monday, August 24, 2026

Pradhan Mantri Kisan Samman Nidhi ಪಿ.ಎಂ.ಕಿಸಾನ್ ಸಮ್ಮಾನ್ ನಿಧಿ ಪ್ರೋತ್ಸಾಹ ಧನ ನಿರಂತರ ಪಡೆಯಲು‌ ಅರ್ಹ ರೈತರ ಇ- ಕೆವೈಸಿ ಕಡ್ಡಾಯ.ಕೃಷಿ ಇಲಾಖೆ ಮಾಹಿತಿ

Date:

Pradhan Mantri Kisan Samman Nidhi ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿ.ಎಂ-ಕಿಸಾನ್) ಯೋಜನೆಯಡಿ ಪ್ರೋತ್ಸಾಹಧನವನ್ನು ನಿರಂತರವಾಗಿ ಪಡೆಯಲು ಜಿಲ್ಲೆಯ ಎಲ್ಲಾ ಅರ್ಹ ರೈತರು ಪ್ರತಿ ವರ್ಷ ಬಯೋಮೆಟ್ರಿಕ್ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ, 2019 ರ ಫೆಬ್ರವರಿ 1ರ ಪೂರ್ವದಲ್ಲಿ ಭೂ ಒಡೆತನ ಹೊಂದಿರುವ ಪ್ರತಿ ಅರ್ಹ ಸಣ್ಣ, ಅತಿಸಣ್ಣ, ಮಧ್ಯಮ ಮತ್ತು ದೊಡ್ಡ ರೈತ ಕುಟುಂಬಗಳಿಗೆ ವರ್ಷಕ್ಕೆ ರೂ. 6,000/- ಪ್ರೋತ್ಸಾಹಧನವನ್ನು ಪ್ರತಿ 4 ತಿಂಗಳಿಗೊಮ್ಮೆ 3 ಕಂತುಗಳಲ್ಲಿ (ತಲಾ ರೂ.2,000/-) ನೇರವಾಗಿ ಖಾತೆಗೆ ಜಮೆ ಮಾಡಲಾಗುತ್ತಿದೆ. ಈ ಹಣ ಪಾವತಿಯನ್ನು ಮುಂದುವರಿಸಲು ‘ಫ್ರೂಟ್ಸ್’ ತಂತ್ರಾಂಶದ ಗುರುತಿನ ಸಂಖ್ಯೆಯಂತೆ ಅಗ್ರಿಸ್ಟ್ಯಾಕ್ ಯೋಜನೆ ಅಡಿ ಗುರುತಿನ ಸಂಖ್ಯೆಯನ್ನು ಸೃಜಿಸುವುದು ಕಡ್ಡಾಯಗೊಳಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 1,40,366 ಫಲಾನುಭವಿಗಳಿದ್ದು, ಇದರಲ್ಲಿ 1,40,256 ರೈತರ ಬಯೋಮೆಟ್ರಿಕ್ ಇ-ಕೆವೈಸಿ ಪ್ರಕ್ರಿಯೆ ಇನ್ನೂ ಬಾಕಿ ಉಳಿದಿದೆ.
ತಾಲೂಕುವಾರು ಬಾಕಿ ವಿವರ: ಶಿವಮೊಗ್ಗ 18,565, ಭದ್ರಾವತಿ: 19,420, ತೀರ್ಥಹಳ್ಳಿ 16,716, ಸಾಗರ 20,416
, ಹೊಸನಗರ 13,134, ಶಿಕಾರಿಪುರ 25,836, ಸೊರಬ 26,169.

ರೈತರು ಸಮೀಪದ ಸಿಎಸ್‌ಸಿ ಕೇಂದ್ರಗಳಿಗೆ ಭೇಟಿ ನೀಡಿ ಬೆರಳಚ್ಚು/ಬಯೋಮೆಟ್ರಿಕ್ ಮೂಲಕ ಇ-ಕೆವೈಸಿ ಮಾಡಿಸಬಹುದು.

Pradhan Mantri Kisan Samman Nidhi ಕೇಂದ್ರ ಸರ್ಕಾರದ ‘PMKISAN e-KYC through FaceRecognition App’ ಮೂಲಕ ಮುಖ (ಫೇಸ್) ದೃಢೀಕರಣದ ಆಧಾರದಲ್ಲಿ ರೈತ ಸಂಪರ್ಕ ಕೇಂದ್ರಗಳಲ್ಲಿ ಇ-ಕೆವೈಸಿ ಮಾಡಿಸಿಕೊಳ್ಳಬಹುದು.
ಆದ್ದರಿಂದ, ಫಲಾನುಭವಿ ರೈತರು ಕೂಡಲೇ ತಮ್ಮ ಆಧಾರ್ ಕಾರ್ಡ್‌ನೊಂದಿಗೆ ಹತ್ತಿರದ ಸಿಎಸ್‌ಸಿ ಕೇಂದ್ರ ಅಥವಾ ರೈತ ಸಂಪರ್ಕ ಕೇಂದ್ರಕ್ಕೆ ತೆರಳಿ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಯೋಜನೆಯ ಸೌಲಭ್ಯವನ್ನು ಮುಂದುವರಿಸಬೇಕಾಗಿ ಜಂಟಿ ಕೃಷಿ ನಿರ್ದೇಶಕರು ಕೋರಿದ್ದಾರೆ. 

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...

ರಕ್ಷಾಬಂಧನವು ಸಹೋದರ- ಸಹೋದರರಿಯರ ನಡುವಿನ ಬಾಂಧವ್ಯ ಗಟ್ಟಿಗೊಳಿಸುವ ಹಬ್ಬ: ರಾಜಯೋಗಿನಿ ಬಿ.ಕೆ.ಅನಸೂಯ ಅಕ್ಕ

ರಕ್ಷಾಬಂಧನವು ಕೇವಲ ಒಂದು ಹಬ್ಬವಲ್ಲ. ಅದು ಪ್ರೀತಿ, ವಿಶ್ವಾಸ, ಗೌರವ ಮತ್ತು...