Friday, August 28, 2026
Friday, August 28, 2026

ಇಎಸ್ಐ ಆಸ್ಪತ್ರೆಗೆ ಶಾಸಕರ ದಿಢೀರ್ ಭೇಟಿ. ಪ್ರಮುಖ ಔಷಧಿಗಳ ಕೊರತೆಯಾಗದಂತೆ ನಿರ್ವಹಿಸಲು ವೈದ್ಯರಿಗೆ ಖಡಕ್ ಸೂಚನೆ

Date:

ಶಿವಮೊಗ್ಗ ನಗರದ ಶ್ರಮಿಕ ವರ್ಗಕ್ಕೆ ಗುಣಮಟ್ಟದ ವೈದ್ಯಕೀಯ ಸೇವೆ ಹಾಗೂ ಸಕಾಲಕ್ಕೆ ಅಗತ್ಯ ಔಷಧಿಗಳು ಸಿಗುವಂತೆ ನೋಡಿಕೊಳ್ಳುವುದು ಆರೋಗ್ಯ ಇಲಾಖೆಯ ಆದ್ಯ ಕರ್ತವ್ಯವಾಗಿದ್ದು, ಇದರಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ತೋರಿದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಶಿವಮೊಗ್ಗ ನಗರ ಶಾಸಕರಾದ ಶ್ರೀ ಎಸ್. ಎನ್. ಚನ್ನಬಸಪ್ಪ (ಚೆನ್ನಿ) ಅವರು ತಿಳಿಸಿದ್ದಾರೆ.

ಶಿವಮೊಗ್ಗ ನಗರ ವ್ಯಾಪ್ತಿಯ ಕಾರ್ಮಿಕರಿಂದ ಇಎಸ್ಐಸಿ ಡಿಸ್ಪೆನ್ಸರಿ ನಿರ್ವಹಣೆ ಹಾಗೂ ಚಿಕಿತ್ಸಾ ಲೋಪಗಳ ಕುರಿತು ಅಹವಾಲುಗಳು ಬಂದ ಹಿನ್ನೆಲೆಯಲ್ಲಿ, ಇಂದು ಬೆಳಿಗ್ಗೆ ನಗರದ ಮೂರು ಇಎಸ್ಐ (ESIC) ಡಿಸ್ಪೆನ್ಸರಿ ಶಾಸಕರು ದಿಢೀರ್ ಭೇಟಿ ನೀಡಿ ಪ್ರಗತಿ ಹಾಗೂ ವ್ಯವಸ್ಥೆಯ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಆಸ್ಪತ್ರೆಯ ಔಷಧಿ ವಿತರಣಾ ಕೇಂದ್ರ ಹಾಗೂ ಪ್ರಯೋಗಾಲಯಗಳನ್ನು ಖುದ್ದಾಗಿ ವೀಕ್ಷಿಸಿದ ಶಾಸಕರು, ಚಿಕಿತ್ಸೆಗೆ ಬಂದಿದ್ದ ಕಾರ್ಮಿಕರು ಮತ್ತು ಅವರ ಕುಟುಂಬಸ್ಥರೊಂದಿಗೆ ಸಮಾಲೋಚನೆ ನಡೆಸಿ ಸಮಸ್ಯೆಗಳನ್ನು ಆಲಿಸಿದರು.

ಔಷಧಿಗಳ ಕೊರತೆ ನೀಗಿಸುವುದು: ಕಾರ್ಮಿಕರಿಗೆ ಅಗತ್ಯವಿರುವ ಪ್ರಮುಖ ಔಷಧಿಗಳ ಕೊರತೆಯಾಗದಂತೆ ಮುಂಚಿತವಾಗಿಯೇ ದಾಸ್ತಾನು ಇಟ್ಟುಕೊಳ್ಳಬೇಕು ಹಾಗೂ ಯಾವುದೇ ರೋಗಿಗಳನ್ನು ಹೊರಗಿನ ಮೆಡಿಕಲ್‌ಗಳಿಗೆ ಕಳುಹಿಸದೆ ಆಸ್ಪತ್ರೆಯಲ್ಲೇ ಉಚಿತವಾಗಿ ಔಷಧ ಒದಗಿಸಬೇಕು.

ವೈದ್ಯರ ಕರ್ತವ್ಯ ನಿಷ್ಠೆ: ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಸಮಯಪಾಲನೆ ಮಾಡಬೇಕು. ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ ಸೂಕ್ತ ಸಮಯದಲ್ಲಿ ಪ್ರಾಥಮಿಕ ಹಾಗೂ ತುರ್ತು ಚಿಕಿತ್ಸೆ ನೀಡಬೇಕು.

ಮೂಲಸೌಕರ್ಯ & ನೈರ್ಮಲ್ಯ: ಆಸ್ಪತ್ರೆ ಆವರಣದಲ್ಲಿ ಸ್ವಚ್ಛತೆ, ಕುಡಿಯುವ ನೀರು ಮತ್ತು ಮೂಲಸೌಕರ್ಯಗಳ ಕೊರತೆ ಇರದಂತೆ ವ್ಯವಸ್ಥೆ ಕಲ್ಪಿಸಬೇಕೆಂದು ಶಾಸಕರು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕಾ.ತ.ಚಿಕ್ಕಣ್ಣನವರ ‘ಮನಸು ಮುಗಿಲು’

-ಡಾ. ರವಿ ಎಂ. ಸಿದ್ಲಿಪುರ Klive Special Article ಕನ್ನಡ ಸಣ್ಣಕಥಾ ಪರಂಪರೆಯಲ್ಲಿ...

Rotary Club Shimoga ಇಂಟರಾಕ್ಟ್ ಕ್ಲಬ್ ಗಳು ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನಕ್ಕೆ ಅತ್ಯುತ್ತಮ ವೇದಿಕೆ: ಸುಮತಿ ಜಿ.ಕುಮಾರಸ್ವಾಮಿ

Rotary Club Shimoga ಇಂಟರಾಕ್ಟ್ ಕ್ಲಬ್‌ಗಳು ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿಯೇ ಸಾರ್ವಜನಿಕ...

S.N. Channabasappa “ಮನರಂಜನೆ” ಮನುಷ್ಯ ಜೀವನದ ಭಾಗ.ಆ ಸಾಂಸ್ಕೃತಿಕ ಸೊಬಗು ಜೀವನದಲ್ಲಿ ಅಡಕವಾಗಿರಬೇಕು- ಎಸ್.ಎನ್.ಚನ್ನಬಸಪ್ಪ

S.N. Channabasappa ಮಾರ್ನಾಮಿಬೈಲು ಎನ್ನುವುದು ಒಂದು ಇತಿಹಾಸ ಪ್ರಸಿದ್ದತೆ ಪಡೆದಿದೆ, ನಗರದ...