Friday, August 28, 2026
Friday, August 28, 2026

ವಿದ್ಯಾರ್ಥಿಗಳ ಹಿತರಕ್ಷಣೆ ಮತ್ತು ಗುಣಮಟ್ಟದ ಶಿಕ್ಷಣಕ್ಕೆ ನಮ್ಮ ಸರ್ಕಾರದ ಬದ್ಧತೆ : ಡಿ.ಕೆ.ಶಿವಕುಮಾರ್

Date:

ರಾಜ್ಯದ ವಿದ್ಯಾರ್ಥಿಗಳ ಭವಿಷ್ಯವನ್ನು ಉಜ್ವಲಗೊಳಿಸಲು ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಆಮೂಲಾಗ್ರ ಬದಲಾವಣೆ ತರಲು ನಮ್ಮ ಸರ್ಕಾರವು ‘ವಿದ್ಯಾರ್ಥಿ ಸಮಸ್ಯೆಗಳು ಮತ್ತು ಶೈಕ್ಷಣಿಕ ಸುಧಾರಣೆಗಳ ಸಚಿವ ಸಂಪುಟ ಉಪ-ಸಮಿತಿ’ಯನ್ನು ರಚಿಸಿದೆ. ಎಂದು ಸನ್ಮಾನ್ಯ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.

ರಚಿಸಲಾಗಿರುವ ಸಚಿವ ಸಂಪುಟ ಉಪಸಮಿತಿಯಲ್ಲಿ
ಸಚಿವರಾದ ಶ್ರೀ ಯು.ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ ರಚನೆಯಾಗಿರುವ ಈ ಸಮಿತಿಯಲ್ಲಿ ಸಚಿವರಾದ ಶ್ರೀ ಬಸವರಾಜ ರಾಯರೆಡ್ಡಿ, ಶ್ರೀ ಪ್ರಿಯಾಂಕ್ ಖರ್ಗೆ, ಶ್ರೀ ಶರಣಪ್ರಕಾಶ್ ಪಾಟೀಲ್ ಹಾಗೂ ಶ್ರೀ ಮಧು ಬಂಗಾರಪ್ಪ ಸದಸ್ಯರಾಗಿದ್ದಾರೆ.

ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆಗೆ ಸಂಪೂರ್ಣ ಕಡಿವಾಣ ಹಾಕುವುದು, ಖಾಸಗಿ ಶಿಕ್ಷಣ ಸಂಸ್ಥೆಗಳ ಶುಲ್ಕ ನಿಯಂತ್ರಣ, ಸರ್ಕಾರಿ ಶಿಕ್ಷಣ ಸಂಸ್ಥೆಗಳ ಮೂಲಸೌಕರ್ಯ ಬಲವರ್ಧನೆ, ಉದ್ಯೋಗಾಧಾರಿತ ಪಠ್ಯಕ್ರಮ, ವಿದ್ಯಾರ್ಥಿಗಳ ಮಾನಸಿಕ ಸ್ವಾಸ್ಥ್ಯ ಕಾಪಾಡುವ ಮತ್ತು ಸಮಾನ ಶಿಕ್ಷಣಾವಕಾಶ ಒದಗಿಸುವ ನಿಟ್ಟಿನಲ್ಲಿ ಈ ಸಮಿತಿ ಕಾರ್ಯನಿರ್ವಹಿಸಲಿದೆ. ವಿದ್ಯಾರ್ಥಿಗಳು, ಪೋಷಕರು ಮತ್ತು ತಜ್ಞರೊಂದಿಗೆ ಸಮಗ್ರ ಚರ್ಚೆ ನಡೆಸಿ, ಒಂದು ತಿಂಗಳ ಒಳಗಾಗಿ ಸಮಿತಿಯು ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದು, ನಮ್ಮ ಯುವಜನತೆಯ ಶೈಕ್ಷಣಿಕ ಭವಿಷ್ಯವನ್ನು ಸುರಕ್ಷಿತವಾಗಿಸಲು ನಾವು ಸದಾ ಬದ್ಧರಾಗಿದ್ದೇವೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಸರ್ಕಾರದ ನಿರ್ಧಾರವನ್ನ ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕಾ.ತ.ಚಿಕ್ಕಣ್ಣನವರ ‘ಮನಸು ಮುಗಿಲು’

-ಡಾ. ರವಿ ಎಂ. ಸಿದ್ಲಿಪುರ Klive Special Article ಕನ್ನಡ ಸಣ್ಣಕಥಾ ಪರಂಪರೆಯಲ್ಲಿ...

Rotary Club Shimoga ಇಂಟರಾಕ್ಟ್ ಕ್ಲಬ್ ಗಳು ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನಕ್ಕೆ ಅತ್ಯುತ್ತಮ ವೇದಿಕೆ: ಸುಮತಿ ಜಿ.ಕುಮಾರಸ್ವಾಮಿ

Rotary Club Shimoga ಇಂಟರಾಕ್ಟ್ ಕ್ಲಬ್‌ಗಳು ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿಯೇ ಸಾರ್ವಜನಿಕ...