Saturday, August 29, 2026
Saturday, August 29, 2026

ಸೆಲ್ ಫೋನ್ ರಿಪೇರಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ

Date:

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ದಿನಾಂಕ: 07/09/2026 ರಿಂದ 31 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಉಚಿತ ಸೆಲ್ ಫೋನ್ ತರಬೇತಿ ಶಿಬಿರವನ್ನು ಏರ್ಪಡಿಸಿದೆ.
ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 49 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಹೊಂದಿದ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.
ಆಸಕ್ತಿಯುಳ್ಳ ಅಭ್ಯರ್ಥಿಗಳು ದಿನಾಂಕ: 07/09/2026 ಸೋಮವಾರ ಬೆಳಗ್ಗೆ 9.30 ಗಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಸಂದರ್ಶನಕ್ಕೆ ಹಾಜರಾಗಲು ಅಸಾಧ್ಯವಾದಲ್ಲಿ ದಿನಾಂಕ: 07/09/2026 ರೊಳಗೆ ಸಂಸ್ಥೆಯನ್ನು ಈ ಕೆಳಕಂಡ ದೂರವಾಣಿ ಸಂಖ್ಯೆ 8970476050, 9591514154, 6363139123, 9686248369, 9886935603 ಗಳಿನ್ನು ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ನಾಗೇಂದ್ರ ರಾಜೀನಾಮೆ ವಿಚಾರದಲ್ಲಿ ಬಿಜೆಪಿ ಹೋರಾಟ ಮುಂದುವರಿಕೆ : ಬಿ.ವೈ.ವಿಜಯೇಂದ್ರ

B.Y. Vijayendra ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ವಿಚಾರವನ್ನು ನಾನು...

B.Y. Raghavendra ಶಿವಮೊಗ್ಗದಿಂದ ಆಂಧ್ರದ ಮಚಿಲಿಪಟ್ಣಂ ಗೆ ವಿಶೇಷ ರೈಲು – ಸಂಸದ ಬಿ.ವೈ‌ರಾಘವೇಂದ್ರ

B.Y. Raghavendra ಶಿವಮೊಗ್ಗ ಜನತೆಗೆ ಮತ್ತೊಂದು ವಿಶೇಷ ಸಿಹಿಸುದ್ದಿ ದೊರೆತಿದ್ದು, ಆಂಧ್ರ...

B.Y. Raghavendra ಕಸ್ತೂರಿ ರಂಗನ್ ವರದಿ ಕರಡು ಜಾರಿ ಬಗ್ಗೆ ಪಕ್ಷದ ಸಭೆಯಲ್ಲಿ ಸುದೀರ್ಘ ಚರ್ಚೆ- ಬಿ.ವೈ.ರಾಘವೇಂದ್ರ

B.Y. Raghavendra ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಶಿವಮೊಗ್ಗದಲ್ಲಿ...

Klive Special Article ಕರೆದರೆ ಬರಬಾರದೆ?ಶ್ರೀರಾಯರ ಆರಾಧನಾ ವಿಶೇಷ ಲೇಖನ.ಕರ್ತೃ: ಎನ್.ಜಯಭೀಮ ಜೊಯ್ಸ್, ಶಿವಮೊಗ್ಗ.

Klive Special Article “ಕರೆದರೆ ಬರಬಾರದೇ ಗುರು ರಾಘವೇಂದ್ರ/ವರ ಮಂತ್ರಾಲಯ ಪುರ...