Sunday, August 30, 2026
Sunday, August 30, 2026

DC Shivamogga ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ-ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

Date:

DC Shivamogga ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ ನಗರದ ನಾಗರಿಕರು ಯಾರಾದರೂ ನಾಪತ್ತೆಯಾಗಿದ್ದರೆ ಅಥವಾ ಸಂಪರ್ಕಕ್ಕೆ ಸಿಗದೇ ಇದ್ದಲ್ಲಿ, ತಕ್ಷಣವೇ ಅವರ ವಿವರಗಳನ್ನು ಒದಗಿಸುವಂತೆ ರಾಜ್ಯ ಸರ್ಕಾರವು ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ಕೇಂದ್ರ ಗೃಹ ಸಚಿವಾಲಯ ಹಾಗೂ ವಿದೇಶಾಂಗ ವ್ಯವಹಾರಗಳ ಸಚಿವಾಲಯದೊಂದಿಗೆ ರಾಜ್ಯ ಸರ್ಕಾರವು ಸತತ ಸಂಪರ್ಕದಲ್ಲಿದ್ದು, ಸಂತ್ರಸ್ತ ಕುಟುಂಬಗಳಿಗೆ ಅಗತ್ಯ ನೆರವು ನೀಡಲು ಮತ್ತು ನಾಪತ್ತೆಯಾದವರನ್ನು ಪತ್ತೆಹಚ್ಚಲು ಕ್ರಮ ಕೈಗೊಳ್ಳುತ್ತಿದೆ. ನೇಪಾಳದಲ್ಲಿ ನಿಮ್ಮ ಕುಟುಂಬಸ್ಥರು, ಸ್ನೇಹಿತರು ಅಥವಾ ಪರಿಚಿತರು ನಾಪತ್ತೆಯಾಗಿದ್ದಾರೆಂದು ಶಂಕಿಸಲಾಗಿದ್ದರೆ, ಸಾರ್ವಜನಿಕರು ನಾಪತ್ತೆಯಾದ ವ್ಯಕ್ತಿಯ ಪೂರ್ಣ ಹೆಸರು, ಮೊಬೈಲ್ ಸಂಖ್ಯೆ, ಮತ್ತು ಸಮಯ ಹಾಗೂ ಖಾಯಂ ವಿಳಾಸದ ವಿವರಗಳನ್ನು ಸರ್ಕಾರಕ್ಕೆ ತಕ್ಷಣವೇ ಒದಗಿಸಲು ಕೋರಲಾಗಿದೆ.

DC Shivamogga ಸಂತ್ರಸ್ತರು ಮತ್ತು ಅವರ ಕುಟುಂಬಸ್ಥರ ನೆರವಿಗಾಗಿ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (SEOC) 24×7 ಸಹಾಯವಾಣಿ ತೆರೆದಿದ್ದು, ಸಾರ್ವಜನಿಕರು 1070 (ಟೋಲ್ ಫ್ರೀ) ಅಥವಾ 080-22253707 ಸಂಖ್ಯೆಗೆ ಕರೆ ಮಾಡಬಹುದು. ಇಮೇಲ್ ಮೂಲಕ ಮಾಹಿತಿ ನೀಡಲು seockarnataka@gmail.com ವಿಳಾಸಕ್ಕೆ ಕಳುಹಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...

Shivamogga News ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡಾ ಸ್ಫೂರ್ತಿ ರೂಢಿಸಿಕೊಳ್ಳಬೇಕು: ಶ್ರೀ ಚಂದ್ರಪ್ಪ ಎಸ್. ಗುಂಡಪಲ್ಲಿ

Shivamogga News ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮೂಲಕ ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡಾ...