Sunday, August 30, 2026
Sunday, August 30, 2026

Department of Posts ಗ್ರಾಮೀಣ ಅಂಚೆ ಪಾಲಕ – ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Date:

Department of Posts ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಶಿವಮೊಗ್ಗ ಅಂಚೆ ವಿಭಾಗದಲ್ಲಿ ಒಟ್ಟು 55 ಹುದ್ದೆಗಳು ಖಾಲಿ ಇವೆ. ಅಭ್ಯರ್ಥಿಗಳು18 ರಿಂದ 40 ವರ್ಷ (ಮೀಸಲಾತಿ ವರ್ಗಗಳಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ)ದೊಳಗಿನವರಾಗಿದ್ದು, 10 ನೇ ತರಗತಿ ಉತ್ತೀರ್ಣರಾಗಿರಬೇಕು.

ಗಣಿತ ಮತ್ತು ಇಂಗ್ಲಿಷ್ ವಿಷಯಗಳಲ್ಲಿ ಕನಿಷ್ಠ ತೇರ್ಗಡೆ ಅಂಕ ಹೊಂದಿರಬೇಕು ಹಾಗೂ 10ನೇ ತರಗತಿಯಲ್ಲಿ ಕನ್ನಡವನ್ನು ಒಂದು ಭಾಷೆಯಾಗಿ ಅಧ್ಯಯನ ಮಾಡಿರಬೇಕು.

Department of Posts 10ನೇ ತರಗತಿಯ ಅಂಕಗಳ ಆಧಾರದ ಮೇಲೆ ಆನ್‌ಲೈನ್ ಮೂಲಕವೇ ನೇಮಕಾತಿ ನಡೆಯಲಿದೆ.
ಅರ್ಜಿ ನೋಂದಣಿಗೆ ಕೊನೆಯ ದಿನಾಂಕ: 21.09.2026 ಆಗಿದ್ದು, ಅರ್ಜಿ ತಿದ್ದುಪಡಿ ಹಾಗೂ ಶುಲ್ಕ ಪಾವತಿಗೆ ದಿನಾಂಕ: 23.09.2026 ರಿಂದ 24.09.2026 ಅವಕಾಶವಿರುತ್ತದೆ.
ಅರ್ಹ ಅಭ್ಯರ್ಥಿಗಳು https://indiapost.gov.in/gdsonlineengagement ವೆಬ್‌ಸೈಟ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ಅಥವಾ ಶಿವಮೊಗ್ಗ ವಿಭಾಗದ ಅಂಚೆ ಕಚೇರಿ ಹಾಗೂಸಂಪರ್ಕ ಸಂಖ್ಯೆ: 08182-222835 / 222516 ಸಂಪರ್ಕಿಸಬಹುದು ಎಂದು‌ ಶಿವಮೊಗ್ಗ ಅಂಚೆ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...

Shivamogga News ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡಾ ಸ್ಫೂರ್ತಿ ರೂಢಿಸಿಕೊಳ್ಳಬೇಕು: ಶ್ರೀ ಚಂದ್ರಪ್ಪ ಎಸ್. ಗುಂಡಪಲ್ಲಿ

Shivamogga News ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮೂಲಕ ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡಾ...