Monday, September 7, 2026
Monday, September 7, 2026

ಶಿವಮೊಗ್ಗ ಸನಿಹದ ಕಲ್ಲೂರಿನಲ್ಲಿ ಸೆ.2 ರಂದು ಮಾರಿಕಾಂಬ ಸ್ಥಿರಮೂರ್ತಿ ಅಷ್ಟಬಂಧ ಪ್ರತಿಷ್ಠಾಪನೆ

Date:

ಶಿವಮೊಗ್ಗ ತಾಲೂಕಿನ ಹಾಯ್ ಹೊಳೆ ಅಂಚೆಯ ಕಲ್ಲೂರು ಗ್ರಾಮದ ಶ್ರೀ ಮಾರಿಕಾಂಬ ಸೇವಾ ಸಮಿತಿ ವತಿಯಿಂದ ಮಾರಿಕಾಂಬ ಸ್ಥಿರಮೂರ್ತಿ ಅಷ್ಟಬಂಧ ಪ್ರತಿಷ್ಠೆ ಹಾಗೂ 48 ಸಹಿತ ಬ್ರಹ್ಮಕಲಶಾಭಿಶೇಕ ಸಮಾರಂಭ ನಾಳಿನ ಆ. 2 ಹಾಗೂ 3 ರಂದು ನಡೆಯಲಿದೆ.
ಆ. ಎರಡರ ನಾಳೆ ಸಂಜೆ 6 ಗಂಟೆಗೆ ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯಲಿದ್ದು, ಆ. ಮೂರರಂದು ಆದಿಚುಂಚನಗಿರಿ ಮಹಾಸಂಸ್ಥಾನದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ವಿವಿಧ ಪೂಜಾ ಕಾರ್ಯಕ್ರಮಗಳು ಸುಬ್ರಮಣ್ಯ ಹೆಬ್ಬಾರ್ ಪೌರೋಹಿತ್ಯದಲ್ಲಿ ನಡೆಯಲಿವೆ.
ಅಂದು ಬೆಳಿಗ್ಗೆ 10:45 ಕ್ಕೆ ಮಹಾಪೂರ್ಣಾಹುತಿ ನಂತರ ಬ್ರಹ್ಮ ಕಳಸಾಭಿಷೇಕ, ಮದ್ಯಾಹ್ನ ಒಂದು ಗಂಟೆಗೆ ಮಹಾ ಮಂಗಳಾರತಿ ಮತ್ತು ಅನ್ನ ಸಂತರ್ಪಣೆ ನಡೆಯಲಿದೆ ಎಂದು ಸೇವಾ ಸಮಿತಿ ತಿಳಿಸಿದೆ.
ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳು ಸಾನಿಧ್ಯ ವಹಿಸಲಿದ್ದು, ಉತ್ಸವ ಮೂರ್ತಿ ಸೇವಾಕರ್ತರಾದ ಸುರೇಶ್ ಕೆ ಬಾಳೆಗುಂಡಿ, ಸಂಸದ ಬಿ. ವೈ. ರಾಘವೇಂದ್ರ, ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಶಾಸಕರಾದ ಶಾರದಾ ಪೂರ್ಯಾನಾಯ್ಕ್, ಡಿ. ಎಸ್. ಅರುಣ್, ಪ್ರಮುಖರಾದ ಸುಂದರೇಶ್, ಕಾಂತೇಶ್, ಅಶೋಕ್ ನಾಯಕ್, ಶ್ರೀಕಾಂತ್, ಶಂಕರ್ ಗನ್ನಿ ಅತಿಥಿಗಳಾಗಿ ಆಗಮಿಸಿದ್ದಾರೆ.
ಪೂಜಾ ಕಾರ್ಯಕ್ರಮದ ವಿವರ ಹಾಗೂ ಹೆಸರು ನೋಂದಾಯಿಸಲು ಸಮಿತಿಯ ಅಧ್ಯಕ್ಷ ಮೂರ್ತಿ 91416 94464, ಕಾರ್ಯದರ್ಶಿ ಮನು ಕುಮಾರ್, ಶ್ರೀಧರ್ 95906 51610ಗೆ ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...