Monday, September 7, 2026
Monday, September 7, 2026

ಅಲ್ಪ ಸಂಖ್ಯಾತರ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

Date:

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮವು 2026-27 ನೇ ಸಾಲಿಗೆ ಮುಸ್ಲಿಂ, ಜೈನ್, ಬೌದ್ದರು, ಸಿಖ್ ಹಾಗೂ ಪಾರ್ಸಿ ಸಮುದಾಯವರಿಗೆ ವಿವಿಧ ಯೋಜನೆಗಳನ್ನು ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ವಿದೇಶಿ ವ್ಯಾಸಂಗ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಶ್ರಮಶಕ್ತಿ ಸಾಲ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಸಮುದಾಯ ಆಧಾರಿತ ತರಬೇತಿ ಯೋಜನೆ, ವ್ಯಾಪಾರ/ ಉದ್ಯಮಿಗಳಿಗೆ ನೇರಸಾಲ ಯೋಜನೆ, ಸಾಂತ್ವನ ಯೋಜನೆ, ಸಿಖ್‌ಲಿಗಾರ್ ಸಮುದಾಯದ ಜನರ ಆರ್ಥಿಕ ಸಬಲೀಕರಣಕ್ಕೆ ಪ್ರೋತ್ಸಾಹ ಯೋಜನೆ, ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ ಯೋಜನೆ, ನವೋದಯ ಯೋಜನೆ, ಫಾಸ್ಟ್ಫುಡ್ ಟ್ರಕ್/ ಟ್ರೇಲರ್/ಮೊಬೈಲ್ ಕಿಚನ್ ಫುಡ್ ಕಿಯೋಸ್ಕ್ ಯೋಜನೆ ಹಾಗೂ ಅಲ್ಪಸಂಖ್ಯಾತರ ಸಮುದಾಯದ ಮಹಿಳಾ ಸ್ವಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗ ಪ್ರೋತ್ಸಾಹ ಯೋಜನೆಯಡಿ www.kmdconline.karnataka.gov.in ಮೂಲಕ ಸೆ.17 ರೊಳಗಾಗಿ ಅರ್ಜಿ ಸಲ್ಲಿಸುವುದು.
ಅರ್ಜಿದಾರರು ಮತೀಯ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರಾಗಿದ್ದು, ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಶ್ರಮಶಕ್ತಿ ಸಾಲ ಯೋಜನೆಯಡಿಯಲ್ಲಿ ಎಲ್ಲಾ ಮೂಲಗಳಿಂದ ಕುಟುಂಬ ವಾರ್ಷಿಕ ಆದಾಯ ಮಿತಿ ರೂ.6 ಲಕ್ಷದೊಳಗಿರಬೇಕು. ಸಾಂತ್ವನ ಯೋಜನೆಯಲ್ಲಿ ಕುಟುಂಬ ವಾರ್ಷಿಕ ಆದಾಯ ರೂ.8 ಲಕ್ಷದದೊಳಗಿರಬೇಕು. ಗಂಗಾ ಕಲ್ಯಾಣ ಯೋಜನೆಯಡಿ ಗ್ರಾಮೀಣ ಪ್ರದೇಶದವರಿಗೆ ರೂ.96000 ವಾರ್ಷಿಕ ಆದಾಯ ಇರಬೇಕು. ಅರ್ಜಿದಾರರು ಕನಿಷ್ಠ 18 ರಿಂದ 55 ವರ್ಷದೊಳಗಿನವರಾಗಿರಬೇಕು. ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ವಾಸದ ದೃಢೀಕರಣ ಪತ್ರ ಮತ್ತು ಪಡಿತರ ಚೀಟಿಯನ್ನು ಹೊಂದಿರಬೇಕು. ನಿಗಮದ ಇತರ ಯೋಜನೆಗಳಡಿಯಲ್ಲಿ ಅರ್ಜಿದಾರರು ಅಥವಾ ಅವರ ಕುಟುಂಬದ ಸದಸ್ಯರು ಈಗಾಗಲೇ ಸಾಲಸೌಲಭ್ಯ ಪಡೆದಿರಬಾರದು. ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಕೇಂದ್ರ/ರಾಜ್ಯ ಸರ್ಕಾರಿ ನೌಕರರಾಗಿರಬಾರದು. ಅರ್ಜಿದಾರರು ಬ್ಯಾಂಕ್ ಖಾತೆ ಹೊಂದಿರಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ನಂಜಪ್ಪ ಆಸ್ಪತ್ರೆ ಮುಂಭಾಗದ ರಸ್ತೆ, ಅಚ್ಯುತರಾವ್ ಲೇಔಟ್, 4ನೇ ತಿರುವು, ಶಿವಮೊಗ್ಗ, ದೂ.ಸಂ :08182-228262 ನ್ನು ಸಂಪರ್ಕಿಸಬಹುದೆಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
[

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...