ಮೀನುಗಾರಿಕೆ ಇಲಾಖೆಯು 2026-27ನೇ ಸಾಲಿನ ಜಿಲ್ಲಾ ವಲಯ ಮೀನುಗಾರಿಕೆ ಯೋಜನೆಯಡಿ ಮೀನುಮರಿ ಖರೀದಿಗೆ ಸಹಾಯಧನ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಸ್ವಂತ ಕೊಳ/ಇಲಾಖೆಯಿಂದ ಗುತ್ತಿಗೆ/ ಹರಾಜಿನಲ್ಲಿ ಪಡೆದ ಕೆರೆಯಲ್ಲಿ ವೈಜ್ಞಾನಿಕವಾಗಿ ಮೀನುಮರಿ ಬಿತ್ತನೆ/ ಸ್ವಂತ ಕೊಳ ನಿರ್ಮಿಸಿಕೊಂಡು ಮೀನುಮರಿ ಪಾಲನೆಗೆ ಬಳಸಲು ಖರೀದಿಸಿದವರಿಗೆ ಮಾತ್ರ ಸಹಾಯಧನ ನೀಡಲಾಗುವುದು.
ಅರ್ಹ ಫಲಾನುಭವಿಗಳು ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಪಂಚಾಯತ್ ಯೋಜನೆಗಳ ಅಧಿಕೃತ ಪೋರ್ಟಲ್ https://shimoga.nic.in ಮುಖಾಂತರ ಆನ್‌ಲೈನ್‌ನಲ್ಲಿ ಸೆ. 30 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ವಿವರಗಳಿಗಾಗಿ ಆಯಾ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಆಯಾ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಮೊಬೈಲ್ ಸಂಖ್ಯೆ ಶಿವಮೊಗ್ಗ-9986040981, ಭದ್ರಾವತಿ-9743370815, ಶಿಕಾರಿಪುರ- 9686939028, ಸಾಗರ -9538044365, ಸೊರಬ -9535386449, ತೀರ್ಥಹಳ್ಳಿ- 8655132438 ಇವರುಗಳನ್ನು ಸಂಪರ್ಕಿಸಬಹುದೆಂದು ಮೀನುಗಾರಿಕೆ ಉಪನಿರ್ದೇಶಕರು ತಿಳಿಸಿರುತ್ತಾರೆ.
ಮೀನಿಮರಿ ಖರೀದಿಗೆ ಸಹಾಯಧನ.ಆನ್ ಲೈನ್ ಅರ್ಜಿ ಆಹ್ವಾನ
Date:
