Saturday, September 19, 2026
Saturday, September 19, 2026

ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

Date:

ಶಿವಮೊಗ್ಗ ಜಿಲ್ಲಾ ಸರ್ಕಾರಿ ಮೆಗ್ಗಾನ್ ಬೋಧನಾ ಆಸ್ಪತ್ರೆಯ ಎ.ಆರ್.ಟಿ. ವಿಭಾಗದಲ್ಲಿ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ಒಂದು ವೈದ್ಯಾಧಿಕಾರಿ ಹುದ್ದೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಎಂಬಿಬಿಎಸ್ ವಿದ್ಯಾರ್ಹತೆ ಹಾಗೂ ಅನುಭವ ಹೊಂದಿರುವ, 70 ವರ್ಷದೊಳಗಿನ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ ರೂ.72,000 ಗೌರವ ಧನ ನೀಡಲಾಗುತ್ತದೆ.
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ತಮ್ಮ ಬಯೋಡೇಟಾ, ವಿದ್ಯಾರ್ಹತೆ ಮತ್ತು ಅನುಭವ ಪ್ರಮಾಣ ಪತ್ರಗಳ ಜೆರಾಕ್ಸ್ ಪ್ರತಿಗಳೊಂದಿಗೆ ದಿನಾಂಕ 23-09-2026 ರ ಸಂಜೆ 4:00 ಗಂಟೆಯೊಳಗೆ ‘ಜಿಲ್ಲಾ ಸರ್ಜನ್ನರು, ಮೆಗ್ಗಾನ್ ಬೋಧನಾ ಆಸ್ಪತ್ರೆ, ಶಿವಮೊಗ್ಗ’ ಇವರ ಕೊಠಡಿಗೆ ನೇರವಾಗಿ ಸಲ್ಲಿಸಬೇಕೆಂದು ಜಿಲ್ಲಾ ಸರ್ಜನರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...