ಶಿಕಾರಿಪುರ ತಾಲೂಕಿನ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬಿಜೆಪಿ ಹಾಗೂ ಬಿಜೆಪಿ ರೈತ ಮೋರ್ಚಾ ವತಿಯಿಂದ ಬೃಹತ್ ಧರಣಿ ಸತ್ಯಾಗ್ರಹ ನಡೆಸಲಾಯಿತು.
ರೈತರ ಪಂಪ್ಸೆಟ್ಗಳಿಗೆ ಪ್ರತಿದಿನ 7 ಗಂಟೆ ನಿರಂತರ ಹಾಗೂ ಸಮರ್ಪಕ ವಿದ್ಯುತ್ ಪೂರೈಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಏತ ನೀರಾವರಿ ಯೋಜನೆಗಳಿಗೆ ಅಗತ್ಯ ವಿದ್ಯುತ್ ಒದಗಿಸಿ, ತಾಲೂಕಿನ ಎಲ್ಲಾ ಕೆರೆಗಳನ್ನು ತಕ್ಷಣವೇ ತುಂಬಿಸಬೇಕು ಎಂದು ಒತ್ತಾಯಿಸಿದರು.
ಮಳೆಯ ಕೊರತೆಯಿಂದ ಸಂಕಷ್ಟದಲ್ಲಿರುವ ಶಿಕಾರಿಪುರ ತಾಲೂಕನ್ನು ಬರಪೀಡಿತ ಪ್ರದೇಶವೆಂದು ರಾಜ್ಯ ಸರ್ಕಾರ ಘೋಷಿಸಬೇಕು ಹಾಗೂ ರೈತರ ಇತರೆ ಪ್ರಮುಖ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಶಾಸಕ ಹೆಚ್. ಹಾಲಪ್ಪ, ಪಕ್ಷದ ಹಿರಿಯ ಮುಖಂಡ ಕೆ.ಎಸ್. ಗುರುಮೂರ್ತಿ, ಸ್ಥಳೀಯ ಜನಪ್ರತಿನಿಧಿಗಳು, ನೂರಾರು ರೈತರು ಹಾಗೂ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.
