Saturday, September 19, 2026
Saturday, September 19, 2026

ಶಿವಮೊಗ್ಗದಲ್ಲಿ ಯಶಸ್ವಿಯಾಗಿ ನೆರವೇರಿದ ಏಡ್ಸ್ ಜಾಗೃತಿ ಮ್ಯಾರಥಾನ್: ಕಾಲೇಜು ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ

Date:

ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸಂಸ್ಥೆ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಶಿವಮೊಗ್ಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ, ಜಿಲ್ಲಾ ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆ ಹಾಗೂ ವಿವಿಧ ಕಾಲೇಜುಗಳ ಜಂಟಿ ಸಹಯೋಗದಲ್ಲಿ ಶುಕ್ರವಾರ ನಗರದ ನೆಹರು ಕ್ರೀಡಾಂಗಣದಲ್ಲಿ ಏಡ್ಸ್ ಜಾಗೃತಿ ಮ್ಯಾರಥಾನ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಶಿವಮೊಗ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಮೋಹನ್ ಕುಮಾರ್ ಅವರು ಈ ಜಾಗೃತಿ ಮ್ಯಾರಥಾನ್‌ಗೆ ಅಧಿಕೃತವಾಗಿ ಚಾಲನೆ ನೀಡಿದರು. ಯುವಜನರು ಮತ್ತು ಸಾರ್ವಜನಿಕರಲ್ಲಿ ಎಚ್‌ಐವಿ/ಏಡ್ಸ್ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದ್ದ ಈ ಸ್ಪರ್ಧೆಯಲ್ಲಿ ವಿವಿಧ ಕಾಲೇಜುಗಳ 110 ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದರು.
ಮ್ಯಾರಥಾನ್ ಸ್ಪರ್ಧೆಯ ವಿಜೇತರ ವಿವರ:
ಬಾಲಕರ ವಿಭಾಗ:
ಪ್ರಥಮ ಸ್ಥಾನ: ಕಿರಣ್ ಕೆ. ,ಡಿ.ವಿ.ಎಸ್. ಕಲಾ ಮತ್ತು ವಿಜ್ಞಾನ ಕಾಲೇಜು, ಶಿವಮೊಗ್ಗ.
ದ್ವಿತೀಯ ಸ್ಥಾನ: ತೇಜಸ್ ಡಿ. ಜಿ. ,ಡಿ.ವಿ.ಎಸ್. ಕಲಾ ಮತ್ತು ವಿಜ್ಞಾನ ಕಾಲೇಜು, ಶಿವಮೊಗ್ಗ.
ತೃತೀಯ ಸ್ಥಾನ: ನಿತೀಶ್ ಕುಮಾರ್ ಎಂ. ಡಿ.ವಿ.ಎಸ್. ಕಲಾ ಮತ್ತು ವಿಜ್ಞಾನ ಕಾಲೇಜು, ಶಿವಮೊಗ್ಗ.
ಬಾಲಕಿಯರ ವಿಭಾಗ:
ಪ್ರಥಮ ಸ್ಥಾನ: ಶ್ರೀ ಲಕ್ಷ್ಮಿ ಎಸ್. ಎಂ., ಎನ್.ಇ.ಎಸ್. – ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ ಡ್ ಸ್ಟಡೀಸ್.
ದ್ವಿತೀಯ ಸ್ಥಾನ: ವೇಲ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು.
ತೃತೀಯ ಸ್ಥಾನ: ದೀಪ್ತಿ ಸಿ. ಎಸ್. ಎನ್.ಇ.ಎಸ್. – ಟಿ.ಎ.ಎಸ್.
ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ, ಮೆಡಲ್ ಹಾಗೂ ನಗದು ಬಹುಮಾನ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣಾಧಿಕಾರಿ ಡಾ. ಕಿರಣ್ ಎಸ್. ಕೆ., ತಾಲೂಕು ಆರೋಗ್ಯ ಅಧಿಕಾರಿ ಡಾ. ಚಂದ್ರಶೇಖರ್, ಎಫ್‌ಪಿಎಐ ಚೇರ್ ಪರ್ಸನ್ ಶ್ರೀಮತಿ ಭಾರತಿ ಚಂದ್ರಶೇಖರ್, ಸಹ್ಯಾದ್ರಿ ವಿಜ್ಞಾನ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಶ್ರೀ ಚಂದ್ರಶೇಖರ್ ಎ. ಎಸ್., ಜಿಲ್ಲಾ ಐಸಿಟಿಸಿ ಮೇಲ್ವಿಚಾರಕರಾದ ಶ್ರೀಮತಿ ಮಂಗಳ ಎನ್. ಎಮ್., ತಡೆಗಟ್ಟುವ ಮತ್ತು ನಿಯಂತ್ರಣ ಘಟಕ ಹಾಗೂ ಕ್ಷಯ ರೋಗ ನಿವಾರಣಾ ಕೇಂದ್ರದ ಸಿಬ್ಬಂದಿ ಮತ್ತು ವಿವಿಧ ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...